ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಇದರ ಪದಗ್ರಹಣ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರನ್ನು ಮತ್ತು ನಿರ್ದೇಶಕರಾದ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಇದರ ನೂತನ ಅಧ್ಯಕ್ಷರಾದ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿ, ಉಪಾಧ್ಯಕ್ಷರಾದ ಡಾ. ಆರ್ ಕೆ ಶೆಟ್ಟಿ, ಗೌರವ ಕಾರ್ಯದರ್ಶಿ ಶ್ರೀ ಪ್ರವೀಣ್ ಭೋಜ ಶೆಟ್ಟಿ, ಕೋಶಾಧಿಕಾರಿ ಸಿ ಎ. ಹರೀಶ್ ಬಿ. ಶೆಟ್ಟಿ, ನಿರ್ದೇಶಕರಾದ ಶ್ರೀ ಮಹೇಶ್ ಎಸ್. ಶೆಟ್ಟಿ, ಒಕ್ಕೂಟದ ಮಹಾಪೋಷಕರಾದ ಶ್ರೀಮತಿ ಉಮಾ ಕೃಷ್ಣ ಶೆಟ್ಟಿ, ಪೋಷಕರಾದ ಶ್ರೀ ರತ್ನಾಕರ್ ಶೆಟ್ಟಿ ಮುಂಡ್ಕೂರು, ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಹಾಸ್ ಶೆಟ್ಟಿ, ಸಿ. ಎ. ರಮೇಶ್ ಶೆಟ್ಟಿ ಮತ್ತು ಇನ್ನಿತರರು ಉಪಸ್ಥಿತರಿದ್ದರು.