ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಕೆ.ಆರ್.ಪಾಟ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿರ್ವ ಗ್ರಾ.ಪಂ. ಅಧ್ಯಕ್ಷ ಗಾದಿಗೆ ಚುನಾವಣೆ ನಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಕಲ್ಲೊಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹುದ್ದೆಗಾಗಿ ಕಾಂಗ್ರೆಸ್ ಬೆಂಬಲಿತ ರತನ್ ಕುಮಾರ್ ಶೆಟ್ಟಿ ಮತ್ತು ಬಿಜೆಪಿ ಬೆಂಬಲಿತರಾಗಿ ಶ್ರೀನಿವಾಸ ಶೆಣೈ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷರಾಗಿ ರತನ್ ಕುಮಾರ್ ಶೆಟ್ಟಿ 20-14 ಮತಗಳ ಅಂತರದಲ್ಲಿ ಜಯ ಶಾಲಿಯಾಗಿದ್ದಾರೆ.
34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ ಕಾಂಗ್ರೆಸ್ ಬೆಂಬಲಿತ 19 ಗ್ರಾ.ಪಂ.ಸದಸ್ಯರಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿಯ ಒಂದು ಮತ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಕಾಪು ಕ್ಷೇತ್ರಾಧ್ಯಕ್ಷ ನವೀನ್ಚಂದ್ರ ಜೆ. ಸುವರ್ಣ ಉಪಸ್ಥಿತರಿದ್ದು ರತನ್ಕುಮಾರ್ ಶೆಟ್ಟಿಯವರನ್ನು ಅಭಿನಂದಿಸಿದ್ದಾರೆ.
ಚುನಾಣಾಧಿಕಾರಿಯಾಗಿ ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಚುನಾವಣೆಯ ಪ್ರಕ್ರಿಯೆ ನಡೆಸಿಕೊಟ್ಟರು.