ಬಂಟರ ಸಂಘ (ರಿ) ಸುರತ್ಕಲ್, ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಸಹಯೋಗದೊಂದಿಗೆ ಜನವರಿ 22 ಭಾನುವಾರ ಬೆಳಿಗ್ಗೆ 8.30 ಕ್ಕೆ ಸುರತ್ಕಲ್ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ.
ಬಂಟರ ಕ್ರೀಡೋತ್ಸವವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ ರಾಜ್ ಗೋಪಾಲ್ ರೈ, ಬಂಟರ ಮಾತೃ ಸಂಘದ ಮಾಜೀ ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಉದ್ಯಮಿ ದೇವದಾಸ ಕೆ ಶೆಟ್ಟಿ ಬಾಳ ಸಾನದ ಹೊಸಮನೆ, ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ನಿಟ್ಟೆಗುತ್ತು ರವಿರಾಜ ಶೆಟ್ಟಿ ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃಸಂಘದ ಕೋಶಾಧಿಕಾರಿ ಸಿಎ ರಾಜ್ ಮೋಹನ್ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟರ ಮಾತೃ ಸಂಘದ ಮಾಜೀ ಕಾರ್ಯದರ್ಶಿ ವಸಂತ ಶೆಟ್ಟಿ, ವಿಜಯ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಎನ್ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ಸತೀಶ್ ಶೆಟ್ಟಿ ಕೆಳಗಿನಮನೆ ಮುಂಚೂರು, ಕಾಟಿಪಳ್ಳ ಸಾಯಿ ಎಂಟರ್ ಪ್ರೈಸಸ್ ನ ಮಾಲಕ ಭವಾನಿ ಶಂಕರ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.
ಮಕ್ಕಳಿಗೆ, ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಗ್ರಾಮವಾರು ಕ್ರೀಡಾ ಕೂಟ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್ ತಿಳಿಸಿದ್ದಾರೆ.