ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್ ವತಿಯಿಂದ ಸಮಾಜಬಾಂಧವರಿಗಾಗಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಕಬಡ್ಡಿ ಮತ್ತು ತ್ರೋಬಾಲ್ ಪಂದ್ಯಾಟವು ಫೆ .5 ರಂದು ಮೋರ್ಯಾ ಗೋಸಾವಿ ಕ್ರೀಡಾ ಸಂಕುಲ್ ,ಕೇಶವ್ ನಗರ್ ,ಚಿಂಚ್ವಾಡ್ ಇಲ್ಲಿ ಬೆಳಗ್ಗೆ ಗಂಟೆ 8 :30 ರಿಂದ ನಡೆಯಲಿದೆ . ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆಯ ಖ್ಯಾತ ಮಕ್ಕಳ ತಜ್ಞ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಸುಧಾಕರ ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ತುಳು ಸಂಘ ಪಿಂಪ್ರಿ -ಚಿಂಚ್ವಾಡ್ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್ ಆಗಮಿಸಲಿದ್ದಾರೆ.
ಸಂಜೆ ನಡೆವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕರ್ನಾಟಕ ರಾಜ್ಯ ಇದರ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ,ಗೌರವ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ ,ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ಸಮಾಜಸೇವಕ ಉದಯ ಶೆಟ್ಟಿ ಮುನಿಯಾಲ್ ,ಮುಂಬಯಿಯ ಉದ್ಯಮಿ ಅಜಿತ್ ರೈ ,ಪುಣೆ ಬಂಟರ ಸಂಘದ ಉಪಾಧ್ಯಕ್ಷ ಎರ್ಮಾಳ್ ಚಂದ್ರಹಾಸ್ ಶೆಟ್ಟಿ ,ಬಂಟ್ಸ್ ಎಸೋಸಿಯೇಶನ್ ಪುಣೆ ಉಪಾಧ್ಯಕ್ಷರಾದ ಸತೀಶ್ ರೈ ಕಲ್ಲಂಗಳ ,ತುಳುಕೂಟ ಪುಣೆ ಅಧ್ಯಕ್ಷರಾದ ಮೋಹನ್ ಶೆಟ್ಟಿ ಎಣ್ಣೆಹೊಳೆ ಹಾಗೂ ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷರಾದ ಶೇಖರ ಸಿ ಶೆಟ್ಟಿ ಆಗಮಿಸಲಿದ್ದಾರೆ.
ಈ ಸಂದರ್ಭ ಆಟಗಾರರಾದ ಎರ್ಮಾಳ್ ಅಕ್ಷತ್ ಶೆಟ್ಟಿ ಹಾಗೂ ವಸಂತ್ ಶೆಟ್ಟಿ ಹಿರಿಯಡ್ಕ ಇವರ ಜೀವನ ಶ್ರೇಷ್ಠ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಸಂಘದ ವತಿಯಿಂದ ಸನ್ಮಾನಿಸಲಾಗುವುದು .
ಕ್ರೀಡೋತ್ಸವಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಬಾಂಧವರು ಆಗಮಿಸಿ ಕ್ರೀಡಾ ಕೂಟವನ್ನು ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ ,ಉಪಾಧ್ಯಕ್ಷರಾದ ಜಗದೀಶ್ ಶೆಟ್ಟಿ ,ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಬೆಳ್ಳಂಪಳ್ಳಿ ,ಗೌರವ ಕೋಶಾಧಿಕಾರಿ ಸುಧಾಕರ ಪೆಲತ್ತೂರು ,ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಶೆಟ್ಟಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜ್ಯೋತಿ ವಿ ಶೆಟ್ಟಿ ,ಯುವ ವಿಭಾಗದ ಕಾರ್ಯಾಧ್ಯಕ್ಷ ಆಕಾಶ್ ಜೆ ಶೆಟ್ಟಿ ಮತ್ತು ಸದಸ್ಯರು ವಿನಂತಿಸಿದ್ದಾರೆ.