ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಕೂಲಂಕುಶವಾಗಿ ಮಾತುಕತೆ ಮಾಡಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನು ಬಿಡುಗಡೆಗೊಳಿಸಿದರು. ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ, ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ.
ದಿನಾಂಕ 07.03.2023 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ ಶ್ರೀ ಐಕಳ ಹರೀಶ್ ಶೆಟ್ಟಿಯವರ ಜೊತೆ ವಿಸ್ತೃತವಾದ ಮಾತುಕತೆ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.
ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ. ಮಾನ್ಯ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಮುಖ್ಯಮಂತ್ರಿಗಳ ಬೇಟಿ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಶ್ರೀ ಉಳ್ತೂರು ಮೋಹನ್ ದಾಸ್ ಶೆಟ್ಟಿ ಜೊತೆಯಾದರು. ಈ ಐತಿಹಾಸಿಕ ಕ್ಷಣಕ್ಕೆ ಕಾರಣಕರ್ತರಾದ ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲ್ ರಾಜ್ಯ ಅಧ್ಯಕ್ಷರು ಬಿಜೆಪಿ ಕರ್ನಾಟಕ, ಮಾನ್ಯ ಶ್ರೀ ಗೋಪಾಲ್ ಶೆಟ್ಟಿ ಮುಂಬೈ ಸಂಸದರು, ಜಗತ್ತಿನ ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಎಲ್ಲಾ ಬಂಟರ ಮುಖಂಡರುಗಳಿಗೆ ಪತ್ರಕರ್ತ, ದೃಶ್ಯ ಮಾಧ್ಯಮದ ಗೆಳೆಯರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸಲ್ಲಿಸಿದರು.