ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.
ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಭಾರತಿ ಜಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಕೇಸರಿ ಎಸ್ ಪೂಂಜ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ ಶೆಟ್ಟಿ, ಮಹಿಳಾ ವೇದಿಕೆಯ ಮಾಜಿ ಅಧ್ಯೆಕ್ಷೆ, ಆಶಾ ಶೆಟ್ಟಿ ಬೇಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.