ಈಗಾಗಲೇ ಹಲವಾರು ಚಿತ್ರೋತ್ಸವದಲ್ಲಿ ಪ್ರಶಂಸೆಗೆ ಒಳಗಾದ ಬಹ್ಮಕಮಲ ಸಿನಿಮಾಕ್ಕೆ ಮತ್ತೊಂದು ಗರಿ ಬಂದಿದೆ. ಹೌದು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಬ್ರಹ್ಮಕಮಲ ಚಿತ್ರ ಮಾಡಿದ್ದಾರೆ. ಬ್ರಹ್ಮಕಮಲ ಚಿತ್ರ ಬಿಡುಗಡೆಗೂ ಮುಂಚೆ ಸಾಕಷ್ಟು ಫಿಲ್ಮ್ ಫೆಸ್ಟಿವಲ್ಗಳಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸಿನಿ ವಿಮರ್ಶಕರ ಮೆಚ್ಚುಗಗೆ ಪಾತ್ರವಾಗಿದೆ.
ಈಗಾಗಲೇ ಫ್ರಾನ್ಸ್ನಲ್ಲಿ ನಡೆದ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ, ಸಿಡ್ನಿಯ ವಂಡರ್ ಲ್ಯಾಂಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ, ನೇಪಾಳದ ಓಲ್ಡ್ ಮಂಕ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲೂ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಕೂಡ ಲಭಿಸಿದೆ.
ಇಂಡೋ ಸಿಂಗಪುರ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅದ್ವಿತಿ ಶೆಟ್ಟಿಗೂ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ. ದಾದಾ ಸಾಹೇಬ್ ಫಾಲ್ಕೆ, ಅರುಣೋದಯ, ಕಲಕರಿ, ಚಲನಚಿತ್ರೋತ್ಸವಗಳನ್ನು ಒಳಗೊಂಡಂತೆ ಹಲವು ಚಲನಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ರಾಮನಗರದ ಹತ್ತಿರದ ಒಂದು ಹಳ್ಳಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ.