ನೂತನವಾಗಿ ಆಯ್ಕೆಯಾದ ಸಾಗರ ಕ್ಷೇತ್ರದ ಶಾಸಕರಾದ ಮಾನ್ಯ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಾಗರ ಬಂಟರ ಸಂಘದ ವತಿಯಿಂದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕರು, ಬಂಟರ ಸಂಘಗಳ ಒಳ್ಳೆಯ ಕೆಲಸಕ್ಕೆ ನನ್ನ ಸಹಕಾರ ಇದ್ದೇ ಇದೆ. ಸಮಾಜವನ್ನು ಕೆಳಸ್ತರದಿಂದ ಮೇಲೆತ್ತುವ ಕೆಲಸ ಮಾಡಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಕಾರ್ಯದರ್ಶಿ ಮಹೇಂದ್ರ ಶೆಟ್ಟಿ, ಸಹ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಗೋಪಾಲ್ ಶೆಟ್ಟಿ, ಸಂಘದ ಮುಖಂಡರುಗಳಾದ ಅಮರ್ ಶೆಟ್ಟಿ ಗೌತಮ್ ಪುರ, ಶ್ರೀಧರ್ ಶೆಟ್ಟಿ, ಬೆನಗೋಡು ಭುಜಂಗಶೆಟ್ಟಿ, ಜಯಪ್ರಕಾಶ್ ಶೆಟ್ಟಿ ಅವಿನಹಳ್ಳಿ, ಸಂತೋಷ ಶೆಟ್ಟಿ ಸೂಲದಗುಡ್ಡೆ, ಮಹಾಬಲೇಶ್ವರ್ ಶೆಟ್ಟಿ, ಸುರೇಶ್ ಶೆಟ್ಟಿ ನಿಸ್ರಾಣಿ, ಶ್ರೀನಿವಾಸ್ ಶೆಟ್ಟಿ, ಪ್ರತಾಪ್ ಶೆಟ್ಟಿ, ಸದಾನಂದ ಶೆಟ್ಟಿ, ಜಯರಾಮ್ ಶೆಟ್ಟಿ, ಸತೀಶ್ ಶೆಟ್ಟಿ, ಕುಮಾರ್ ಶೆಟ್ಟಿ, ನಾಗರಾಜ್ ಶೆಟ್ಟಿ, ಸುನಿಲ್ ಶೆಟ್ಟಿ ಯಡೆಹಳ್ಳಿ ಉಪಸ್ಥಿತರಿದ್ದರು.





































































































