ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬಂಟರ ಸಂಘ ಮುಂಬಯಿಯ ವಸಾಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಕಾರ್ಯಧ್ಯಕ್ಷೆ ಉಷಾ ಶ್ರೀಧರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಂಟರ ಸಂಘ ಮುಂಬಯಿ ಇದರ ಪಶ್ಚಿಮ ವಲಯದ ಸಂಯೋಜಕರಾದ ಶಶಿಧರ್ ಕೆ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ನಾಲಾಸೋಪಾರದ ರೀಜೆನ್ಸಿ ಬ್ಯಾಂಕ್ವೆಟ್ ಹಾಲ್ ಇಲ್ಲಿ ಯೋಗ ಶಿಬಿರವು ಆರ್ಟ್ ಆಫ್ ಲಿವಿಂಗ್ ನ ಯೋಗ ಶಿಕ್ಷಕರಾದ ನರ್ಮದಾ ಮತ್ತು ಅವರ ತಂಡದ ನೆರವಿನಿಂದ ಜರಗಿತು.
ಈ ಕಾರ್ಯಕ್ರಮದಲ್ಲಿ ವಸಾಯಿ ನಾಲಾಸೋಪಾರ ವಿರಾರ್ ಪರಿಸರದ ಹೆಚ್ಚಿನ ಮಹಿಳೆಯರು ಉಪಸ್ಥಿತರಿದ್ದು ಯೋಗ, ಪ್ರಾಣಾಯಾಮ ಹಾಗು ಧ್ಯಾನದ ಪ್ರಯೋಜನವನ್ನು ಪಡೆದರು. ಈ ಸಂದರ್ಭದಲ್ಲಿ ವಸಾಯಿ – ದಹಾಣು ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಹರೀಶ್ ಪಾಂಡು ಶೆಟ್ಟಿ, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಧ್ಯಕ್ಷೆ ಜಯ ಅಶೋಕ್ ಶೆಟ್ಟಿ, ಮಂಜುಳಾ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆ ಉಮಾ ಸತೀಶ್ ಶೆಟ್ಟಿ, ಕಾರ್ಯದರ್ಶಿ ಸಂಧ್ಯಾ ಎಸ್ ಶೆಟ್ಟಿ, ಖಜಾಂಚಿ ವೀಣಾ ಎಸ್ ಶೆಟ್ಟಿ, ಮಹಿಳಾ ವಿಭಾಗದ ಇತರ ಪದಾಧಿಕಾರಿಗಳು ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.