ನಮ್ಮ ಜೀವನದಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜೀವನದಲ್ಲಿ ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಸುಜ್ಞಾನದ ಬೆಳಕನ್ನು ನೀಡುವ ಗುರುಗಳನ್ನು ನಾವು ಸ್ಮರಿಸಿಕೊಂಡು ಸತ್ಕಾರ್ಯಗಳಲ್ಲಿ ತೊಡಗಿಸಿಕೊಂಡು ನಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳೋಣ. ನಮ್ಮ ಬಂಟರ ಭವನದ ಚಾವಡಿಯಲ್ಲಿ ಗುರು ನಿತ್ಯಾನಂದ ಸ್ವಾಮಿ ಹಾಗೂ ಸಾಯಿಬಾಬಾರಿಗೆ ನಿತ್ಯ ಪೂಜೆಗಳನ್ನು ಸಲ್ಲಿಸುತ್ತಿದ್ದೇವೆ. ಜೀವನದಲ್ಲಿ ಸನ್ಮಾರ್ಗದ ದಾರಿ ತೋರಿಸುವವರೇ ಗುರುಗಳು. ಪೂಜ್ಯ ಗುರುಗಳ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಅಭಿಪ್ರಾಯಪಟ್ಟರು.
ಪುಣೆ ಬಂಟರ ಸಂಘದ ದಕ್ಷಿಣ – ಪೂರ್ವ ಪ್ರಾದೇಶಿಕ ಸಮಿತಿ ವತಿಯಿಂದ ಜುಲೈ 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದ ಆರತಿ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ನಡೆದ ಗುರು ಪೂರ್ಣಿಮೆ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಸಂಘದ ದಕ್ಷಿಣ ಪೂರ್ವ ಪ್ರಾದೇಶಿಕ ಕಾರ್ಯಾಧ್ಯಕ್ಷ ಶೇಖರ್ ಸಿ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು . ನಂತರ ಪೂಜೆ ಆರತಿಯನ್ನು ನಡೆಸಿ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭ ನಿರಂತರ 64 ಬಾರಿ ಶ್ರೀ ಕ್ಷೇತ್ರ ಶಬರಿಮಲೆ ಯಾತ್ರೆಯನ್ನು ಪೂರೈಸಿದ ಪ್ರಭಾಕರ ಕೋಟ್ಯಾನ್ ಗುರುಸ್ವಾಮಿಯನ್ನು ಶಾಲು Answer ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಪದಾಧಿಕಾರಿಗಳಾದ ದಿನೇಶ್ ಶೆಟ್ಟಿ ಕಳತ್ತೂರು, ಪ್ರಶಾಂತ ಶೆಟ್ಟಿ ಹೆರ್ಡೆಬೀಡು, ವಸಂತ್ ಶೆಟ್ಟಿ ಬೈಲೂರು, ರವಿ ಶೆಟ್ಟಿ ಕಾಪು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್ ಶೆಟ್ಟಿ, ದಿವ್ಯಾ ಎಸ್ ಶೆಟ್ಟಿ, ನಯನಾ ಶೆಟ್ಟಿ, ವೀಣಾ ಪಿ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಪೂಂಜಾ, ಯುವ ವಿಭಾಗದ ಕಾರ್ಯಾಧ್ಯಕ್ಷ ಉದಯ್ ಶೆಟ್ಟಿ, ಅಭಿಷೇಕ್ ಎಸ್ ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳಾದ ಸುಧಾಕರ ಸಿ ಶೆಟ್ಟಿ, ಜಗದೀಶ್ ಬಿ ಶೆಟ್ಟಿ, ರತ್ನಾಕರ ಆರ್ ಶೆಟ್ಟಿ, ಸಂಜೀವ ಆರ್ ಶೆಟ್ಟಿ, ಸಂಪತ್ ಬಿ ಶೆಟ್ಟಿ, ಸಚ್ಚಿದಾನಂದ ಶೆಟ್ಟಿ, ವಸಂತ್ ಎಂ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಯಶೋದಾ ಜಿ ಶೆಟ್ಟಿ, ವಿನೋದಾ ಎಸ್ ಶೆಟ್ಟಿ, ರೋಹಿಣಿ ಶೆಟ್ಟಿ, ಲತಾ ಎಸ್ ಶೆಟ್ಟಿ, ಶೋಭಾ ಶೆಟ್ಟಿ, ಸುನೀತಾ ಶೆಟ್ಟಿ, ಅಂಬಿಕಾ ವಿ ಶೆಟ್ಟಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಬಾಂಧವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಯಿತು.