ಈ ಮೀಡಿಯಾ ಕನ್ನಡ ವೆಬ್ ಸೈಟ್ ಇದರ ಅನಾವರಣ ಕಾರ್ಯಕ್ರಮ ಕಾಪುವಿನ ರೋಹಿತ್ ಆಳ್ವ ಹಾಗೂ ಪ್ರಶಾಂತ್ ಶೆಟ್ಟಿ ಮಾಲಕತ್ವದ ಹೋಟೆಲ್ K1 ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಈ ಮೀಡಿಯಾ ವೆಬ್ ಸೈಟ್ ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಪಡುಬಿದ್ರಿ ಆಸ್ಪೆನ್ ಎಸ್ ಇ ಝೆಡ್ ನ ಮುಖ್ಯಸ್ಥರಾದ ಶ್ರೀ ಅಶೋಕ್ ಶೆಟ್ಟಿ, ಎಸ್.ಕೆ.ಪಿ.ಎ ಅಧ್ಯಕ್ಷರಾದ ವಿನೋದ್ ಕಾಂಚನ್, ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕರಾದ ಮಹಮ್ಮದ್ ಶರಿಫ್ ಉಪಸ್ಥಿತರಿದ್ದು ಸಂಸ್ಥೆಗೆ ಶುಭ ಕೋರಿದರು.