ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಗೋಸ್ಟ್ 15 ರಂದು ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆಯಲಿದ್ದು, ಬಂಟ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಂಗಳೂರು ತಾಲೂಕು ಸಮಿತಿಯು ಎಸ್ಎಸ್ಎಲ್ ಸಿ ಯಲ್ಲಿ 625 ಅಂಕಗಳಲ್ಲಿ 600 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ಹಾಗೂ ಪಿಯುಸಿ ಯಲ್ಲಿ 600 ರಲ್ಲಿ 575 ಮತ್ತು ಅದಕ್ಕಿಂತ ಅಧಿಕ ಅಂಕ ಗಳಿಸಿದ ಸಿಬಿಎಸ್ ಮತ್ತು ಐಸಿಎಸ್ ಸಿಲೆಬಸ್ನಲ್ಲಿ ಪಡೆದ ಗ್ರೇಡ್ ಎ++ ವಿದ್ಯಾರ್ಥಿಗಳಿಗೆ ಆಗೋಸ್ಟ್ 15ರಂದು ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ನಲ್ಲಿ ಪ್ರತಿಭಾ ಪುರಸ್ಕಾರ ಏರ್ಪಡಿಸಿದೆ. ಮಂಗಳೂರು ತಾಲೂಕು ವ್ಯಾಪ್ತಿಗೆ ಒಳಪಟ್ಟ ಬಂಟ ಸಮಾಜದ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ಗಳ ಪ್ರತಿ ಮತ್ತು ನಿಗದಿತ ಅರ್ಜಿ ನಮೂನೆಯೊಂದಿಗೆ ದಿನಾಂಕ 10.08.2023ರ ಒಳಗಡೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಯೊಂದಿಗೆ ಬಂಟ್ಸ್ ಹಾಸ್ಟೇಲ್ ನಲ್ಲಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಗೆ ಕಳುಹಿಸಿ ಕೊಡಬೇಕೆಂದು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ತಿಳಿಸಿದ್ದಾರೆ.