ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಅಬುದಾಬಿಯ ಉದ್ಯಮಿ ಜಯರಾಮ ರೈ ಮಿತ್ರಂಪಾಡಿಯವರು ಶಾಸಕ ಅಶೋಕ್ ಕುಮಾರ್ ರೈಯವರನ್ನು ಜು. 29 ರಂದು ಪುತ್ತೂರು ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ, ಗೌರವಿಸಿದರು. ಉದ್ಯಮಿ ಜಯಕುಮಾರ್ ರೈ ಮಿತ್ರಂಪಾಡಿ, ಉಪ್ಪಿನಂಗಡಿ – ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಪುತ್ತೂರು ಜನ್ಮ ಫೌಂಡೇಶನ್ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವು, ರಿತೇಶ್ ಮಂಗಳೂರು, ರಾಕೇಶ್ ರೈ ಕುದ್ಕಾಡಿಯವರುಗಳು ಉಪಸ್ಥಿತರಿದ್ದರು.
