ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಉದ್ಯಮಿ, ಪೂರ್ಣಶ್ರೀ ಫರ್ನಿಚರ್ಸ್ ಮಾಲೀಕ ರವೀಂದ್ರ ವಿ. ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ಅಮೃತರಾಜ್ ರವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ನಡೆಯಿತು.
ಕಾರ್ಯದರ್ಶಿಯಾಗಿ ಕೆ. ಎಸ್. ನಾಗೇಶ್ ಆಯ್ಕೆಯಾಗಿದ್ದಾರೆ. ರವೀಂದ್ರ ರೈ ಅವರು ಈ ಮೊದಲು ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.