ಬಂಟರ ಸಂಘ ಸಿದ್ದಕಟ್ಟೆ ವಲಯ ಇದರ ವತಿಯಿಂದ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ಎಲಿಯನಡುಗೂಡು ಗ್ರಾಮದ ಕೊನೆರಬೆಟ್ಟು ಗುತ್ತು ಗದ್ದೆಯಲ್ಲಿ ಜರಗಿತು. ದೇಜಣ್ಣ ಶೆಟ್ಟಿ ಗೋಳಿದೊಟ್ಟು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಜಯರಾಮ ಅಡಪ ಕಣಿಯೂರು ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಬಂಟರ ಸಂಘದ ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಜತೆ ಕಾರ್ಯದರ್ಶಿ ಮಂದಾರತಿ ಎಸ್. ಶೆಟ್ಟಿ, ತಾಲೂಕು ಬಂಟರ ಸಂಘದ ಜತೆ ಕಾರ್ಯದರ್ಶಿ ರಂಜನ್ ಶೆಟ್ಟಿ ಅರಳ, ಸಂಘದ ಗೌರವಾಧ್ಯಕ್ಷ ರತ್ನ ಕುಮಾರ್ ಚೌಟ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಕಾರ್ಯದರ್ಶಿ ರತೀಶ್ ಶೆಟ್ಟಿ, ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಧರ್ ಶೆಟ್ಟಿ, ಸುರೇಶ್ ಶೆಟ್ಟಿ, ಗಣೇಶ್ ಶೆಟ್ಟಿ, ಅರುಣಾ ಶೆಟ್ಟಿ, ಪ್ರತಿಭಾ ಶೆಟ್ಟಿ, ಅಶ್ವಿನಿ ಶೆಟ್ಟಿ, ವಾಮದಪದವು ವಲಯ ಬಂಟರ ಅಧ್ಯಕ್ಷ ವಸಂತ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಅರಳ ವಲಯ ಬಂಟರ ಸಂಘದ ಅಧ್ಯಕ್ಷ ಸುಕುಮಾರ್ ಶೆಟ್ಟಿ ಮತ್ತು ಪದಾಧಿಕಾರಿಗಳು, ತಾಲೂಕು ಯುವ ಬಂಟರ ಸಂಘದ ಪದಾಧಿಕಾರಿಗಳು, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷ ಮೋಹನ್ ಜಿ. ಮೂಲ್ಯ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಮತ್ತಿತರಿದ್ದರು.
ನ್ಯಾಯವಾದಿ ಸುರೇಶ್ ಶೆಟ್ಟಿ, ಸಂದೀಪ್ ಶೆಟ್ಟಿ ರಾಯಿ, ರಾಜೇಶ್ ಶೆಟ್ಟಿ ಕ್ರೀಡಾಕೂಟ ನಿರ್ವಹಿಸಿದರು. ದೈ.ಶಿ. ಶಿಕ್ಷಕ ಸತೀಶ್, ಶಿಕ್ಷಕಿ ಅನುಷಾ ಶೆಟ್ಟಿ ತೀರ್ಪುಗಾರರಾಗಿದ್ದರು. ಕಾರ್ಯದರ್ಶಿ ರತೀಶ್ ಶೆಟ್ಟಿ ಸ್ವಾಗತಿಸಿ, ಗಣೇಶ್ ಶೆಟ್ಟಿ ನಿರೂಪಿಸಿದರು.