ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸಿ ಸುಂದರವಾಗಿ ಮೂಡಿಬಂದಿರುವ ತುಳು ಸಿನಿಮಾ “ಕೊರಮ್ಮ”, ಇಂದಿನ ಯುವ ಜನತೆಯನ್ನು ಬೆರಗುಗೊಳಿಸುವಂತೆ ಮಾಡಿದೆ. ಈ ಸಿನಿಮಾವನ್ನು ತುಳು ನಾಡಿನ ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದು ನಿರ್ದೇಶಕ ಶಿವಧ್ವಜ್ ಶೆಟ್ಟಿ ತಿಳಿಸಿದರು.
ಸುರತ್ಕಲ್ ನಲ್ಲಿರುವ ಸಿನಿಗ್ಯಾಲಕ್ಸಿ ಚಿತ್ರಮಂದಿರದಲ್ಲಿ ಕೊರಮ್ಮ ತುಳು ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಸಮಾರಂಭದಲ್ಲಿ ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್, ಸಿನಿಗ್ಯಾಲಕ್ಸಿ ಸಂಸ್ಥೆಯ ನಿರ್ದೇಶಕ ಶಶಿಕುಮಾರ್, ಕೃಷ್ಣ ಅಡ್ಯಂತಾಯ, ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ವೆಂಕಟರಮಣ, ದಿನೇಶ್ ಫರಂಗಿಪೇಟೆ, ಮಧು ಸುರತ್ಕಲ್, ನಟ ಮೋಹನ್ ಶೇಣಿ, ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಸರೋಜ ಟಿ ಶೆಟ್ಟಿ, ಸರಾಯು ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸಿನಿಗ್ಯಾಲಕ್ಸಿಯ ದೀಪಕ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ, ಮುಂತಾದ ಕಡೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ ಎಂದು ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್ ತಿಳಿಸಿದರು. ಸಫೈರ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ಅಡ್ಯಾರ್ ಮಾಧವ ನಾಯ್ಕ್ ಅರ್ಪಿಸಿರುವ ಈ ಚಿತ್ರದ ಹಾಡಿನ ದೃಶ್ಯದಲ್ಲಿ ತುಳುನಾಡಿನ ಪೂರ್ವಜರ ಬದುಕು ಮಾರ್ಮಿಕವಾಗಿ ಪ್ರತಿಬಿಂಬಿತವಾಗಿದೆ. ತುಳುವರ ಹಿರಿಯರ ಕಾಲದ ಪರಿಕರಗಳನ್ನು ಸಮರ್ಥವಾಗಿ ಬಳಸಿಕೊಂಡು ಮಾಡಿರುವ ಈ ಸಿನಿಮಾದ ಕಥೆ – ಚಿತ್ರಕಥೆ – ನಿರ್ದೇಶನ ರಾಷ್ಟ್ರ ಪ್ರಶಸ್ತಿ ಚಿತ್ರ ನಿರ್ದೇಶಕರು ಶಿವಧ್ವಜ್ ಶೆಟ್ಟಿ. ನಿರ್ಮಾಪಕರು ಅಡ್ಯಾರ್ ಮಾಧವ ನಾಯ್ಕ್, ಈಶ್ಚರಿದಾಸ್ ಶೆಟ್ಟಿ ಮತ್ತು ರಾಜೇಶ್ವರಿ ರೈ, ಸಂಗೀತ ಶಿನೋಯ್ ಎ. ಜೋಸೆಫ್, ಛಾಯಾಗ್ರಹಣ ಸುರೇಶ್ ಬೈರಸಂದ್ರ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಶ್ರೀನಿಧಿ ಭಟ್, ಅನುವಾದ ಮತ್ತು ಸಾಹಿತ್ಯ ಕೆ. ಮಹೇಂದ್ರನಾಥ್ ಸಾಲೆತ್ತೂರು, ಕಲೆ ಸಂತೋಷ ಪೂಜಾರಿ ವೇಣೂರು, ಸಹ ನಿರ್ದೇಶನ ಹರ್ಷೀವ ಭಗೀರ, ಪ್ರಸಾಧನ ಕುಮಾರ್ ನೋಣವಿನಕೆರೆ, ನಿರ್ಮಾಣ-ನಿರ್ವಹಣೆ ವೀರೇಶ್ ಎಸ್. ಪಿ. ಕಾರ್ಕಳದ ಬೈಲೂರಿನ ಸುಂದರ ತಾಣದಲ್ಲಿ ಒಂದೇ ಹಂತದಲ್ಲಿ ಚಿತ್ರೀಕಣವಾಗಿರುವ “ಕೊರಮ್ಮ” ಚಿತ್ರದ ತಾರಾಗಣದಲ್ಲಿ – ಗುರುಹೆಗ್ಡೆ, ರೂಪಶ್ರೀ ವರ್ಕಾಡಿ, ಮೋಹನ್ ಶೇಣಿ, ಬಿಂದು ರಕ್ಷಿದಿ, ಜಿನಪ್ರಸಾದ್, ದಿವ್ಯಶ್ರೀ, ನಾಯಕ್, ಲಕ್ಷ್ಮಣ್ ಕುಮಾರ್ ಮಲ್ಲೂರು, ನಮಿತಾ ಕೂಳೂರು, ಸುಮನ ಮಂಗಳೂರು, ಹರೀಶ್ ಜೋಡು ರಸ್ತೆ ಮತ್ತಿರರು ನಟಿಸಿರುತ್ತಾರೆ. ತುಳು ಚಿತ್ರರಂಗಕ್ಕೆ ಬದಲಾವಣೆ ಕೊಡಬಲ್ಲ ಮೌಲ್ಯಯುತವಾದ ಕಥಾವಸ್ತುವನ್ನು “ಕೊರಮ್ಮ” ಚಲನಚಿತ್ರ ಹೊಂದಿದೆ. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.