ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಇದರ ಸಹಯೋಗದೊಂದಿಗೆ ಸುಭಾಷಿತ ನಗರ ರೆಸಿಡೆಂಟ್ ಅಸೋಸಿಯೇಷನ್ (ರಿ) ಇವರ ಸಹಭಾಗಿತ್ವದಲ್ಲಿ ದೇಶದ 76ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಸಂಘದ ಆವರಣದಲ್ಲಿ ಧ್ವಜಾರೋಹಣದೊಂದಿಗೆ ನೆರವೇರಿತು. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಸುಬೇದಾರ್ ಮೇಜರ್ ಶಶಿಧರ್ ಆಳ್ವ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ನ ಅಧ್ಯಕ್ಷ ರಮೇಶ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಪದಾಧಿಕಾರಿಗಳಾದ ಪುಷ್ಪರಾಜ ಶೆಟ್ಟಿ ಕುಡುಂಬೂರು, ಲೀಲಾಧರ ಶೆಟ್ಟಿ ಕಟ್ಲ, ಸುಜೀರ್ ಶೆಟ್ಟಿ, ಜಯರಾಮ ಶೆಟ್ಟಿ, ಶಿಶಿರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಗುಣಶೇಖರ ಶೆಟ್ಟಿ, ರತ್ನಾಕರ ಶೆಟ್ಟಿ, ಪ್ರಹ್ಲಾದ್ ಶೆಟ್ಟಿ, ಸುಭಾಷಿತನಗರ ಅಸೋಸಿಯೇಷನ್ ನ ಪದಾಧಿಕಾರಿಗಳಾದ ನರಸಿಂಹ ಸುವರ್ಣ, ತಾರಾನಾಥ ಸಾಲ್ಯಾನ್, ಚಂದ್ರಶೇಖರ ಶೆಟ್ಟಿ, ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಸುಜಾತ ಶೆಟ್ಟಿ ಕೃಷ್ಣಾಪುರ, ಕೇಸರಿ ಪೂಂಜ, ಸುಜಾತ ಶೆಟ್ಟಿ ಹೊಸಬೆಟ್ಟು, ಮಾಜಿ ಅಧ್ಯಕ್ಷೆ ಬೇಬಿ ಶೆಟ್ಟಿ, ಕವಿತಾ ಪುಷ್ಪರಾಜ್, ಶೈಲಾ ಎಸ್ ಶೆಟ್ಟಿ, ಸವಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.