ನಟ ರೂಪೇಶ್ ಶೆಟ್ಟಿ ಕನ್ನಡದಲ್ಲಿ ಹೊಸ ಸಿನಿಮಾವೊಂದನ್ನು ಮಾಡುತ್ತಿದ್ದು, ಆ ಚಿತ್ರದ ಟೈಟಲ್ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಅಧಿಪತ್ರ’ ಎಂದು ಟೈಟಲ್ ಇಡಲಾಗಿದೆ.
ಈ ಚಿತ್ರ ಕೆ.ಆರ್ ಸಿನಿ ಕಂಬೈನ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗುತ್ತಿದ್ದು, ಚಯನ್ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ. ಸದ್ಯ ಬಿಗ್ಬಾಸ್ ಸೀಸನ್-9 ರಲ್ಲಿ ವಿಜೇತರಾಗಿರುವ ರೂಪೇಶ್ ಶೆಟ್ಟಿ ಇತ್ತೀಚೆಗೆ “ಸರ್ಕಸ್” ಎಂಬ ತುಳು ಚಿತ್ರವನ್ನು ನಿರ್ದೇಶಿಸಿ, ನಾಯಕರಾಗಿ ನಟಿಸಿದ್ದರು. ಆ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಮತ್ತೆ ಕನ್ನಡದತ್ತ ಮುಖ ಮಾಡಿದ್ದಾರೆ.