ಬಂಟರ ಸಂಘ ಮುಂಬಯಿ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯಿಂದ ಆಗಸ್ಟ್ 15 ರಂದು ಕಾಂದಿವಲಿ ಪಶ್ಚಿಮದ ಪೊಯಿಸರ್ ಜಿಮ್ಖಾನದಲ್ಲಿ ಸಂಜೆ ಅಜೆಕಾರು ಕಲಾಭಿಮಾನ ಬಳಗ ಮುಂಬಯಿ ಇವರ ತವರೂರ ನಾಮಾಂಕಿತ ಕಲಾವಿದರ ಕೂಡುವಿಕೆಯಲ್ಲಿ “ನಳ ದಮಯಂತಿ” (ತುಳು) – “ಶ್ರೀರಾಮ ದರ್ಶನ” (ಕನ್ನಡ) ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವನ್ನು ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ನಿಟ್ಟೆ ಎಂಜಿ ಶೆಟ್ಟಿ ದೀಪ ಬೆಳಗಿಸಿ ಚಾಲನೆ ನೀಡಿದರು. ವೇದಿಕೆಯಲ್ಲಿ ಮುಂಬಯಿ ಬಂಟರ ಸಂಘದ ಜೊತೆ ಕೋಶಾಧಿಕಾರಿ ಮುಂಡಪ್ಪ ಎಸ್ ಪಯ್ಯಡೆ, ಹಿರಿಯ ಹೋಟೆಲ್ ಉದ್ಯಮಿ ಕೃಷ್ಣ ಶೆಟ್ಟಿ, ಪ್ರಾದೇಶಿಕ ಸಮಿತಿಯ ಸಂಚಾಲಕ ರವೀಂದ್ರ ಎಸ್. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಕೆ ಪ್ರೇಮನಾಥ್ ಶೆಟ್ಟಿ, ಕಾರ್ಯದರ್ಶಿ ಅಶೋಕ್ ವಿ. ಶೆಟ್ಟಿ, ಕೋಶಾಧಿಕಾರಿ ಗಂಗಾಧರ ಎ. ಶೆಟ್ಟಿ, ಜೊತೆ ಕಾರ್ಯದರ್ಶಿ ರಘುನಾಥ ಎನ್. ಶೆಟ್ಟಿ, ಜೊತೆ ಕೋಶಾಧಿಕಾರಿ ಅವಿನಾಶ್ ಎಂ ಶೆಟ್ಟಿ, ಹಿರಿಯ ಸಲಹೆಗಾರ ಮನೋಹರ ಎನ್. ಶೆಟ್ಟಿ, ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೈಲಜ ಎ ಶೆಟ್ಟಿ, ಸಲಹೆಗಾರ ನಿಕಟಪೂರ್ವ ಕಾರ್ಯಾಧ್ಯಕ್ಷೆ ವಿನೋದಾ ಎ ಶೆಟ್ಟಿ, ಸಹನಾ ಶೆಟ್ಟಿ, ಉದ್ಯಮಿ ಪಾಂಡು ಶೆಟ್ಟಿ, ಮುಂಬಯಿ ಬಂಟರ ಸಂಘದ ಕ್ರೀಡಾ ವಿಭಾಗದ ಮಾಜಿ ಕಾರ್ಯಧ್ಯಕ್ಷ ವಿಠ್ಠಲ್ ಆಳ್ವ, ಅಜೆಕಾರು ಅಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಉಪಸ್ಥಿರಿದ್ದರು.
ಯಕ್ಷಗಾನದ ಮಧ್ಯಾಂತರದಲ್ಲಿ ಭಾಗವತ ದೇವಿ ಪ್ರಸಾದ್ ಆಳ್ವ ತಲಪಾಡಿ, ಚಂಡೆ ಮದ್ದಳೆ ವಾದಕರಾದ ದೇಲಂತ ಮಜಲು ಸುಬ್ರಹ್ಮಣ್ಯ ಭಟ್ ಹಾಗೂ ಪ್ರಶಾಂತ್ ಶೆಟ್ಟಿ ವಗೆನಾಡು, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಸದಾಶಿವ ಆಳ್ವ ತಲಪಾಡಿ ಮತ್ತು ಹರಿರಾಜ ಕಿನ್ನಿಗೋಳಿ ಇವರನ್ನು ಮುಂಡಪ್ಪ ಎಸ್ ಪಯ್ಯಾಡೆ ಮತ್ತು ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ನಿಟ್ಟೆ ಎಂಜಿ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಶೈಲಜಾ ಅಮರನಾಥ್ ಶೆಟ್ಟಿ ಗೌರವಿಸಿದರು.
ಕಲಾವಿದರನ್ನು ಗೌರವಿಸಿದ ಬಳಿಕ ಮುಂಡಪ್ಪ ಎಸ್ ಪಯ್ಯಡೆ ಅವರು ಮಾತನಾಡುತ್ತಾ, ಪೌರಾಣಿಕ ಪ್ರಸಂಗದಲ್ಲಿ ಬರುವ ಪ್ರತಿಯೊಂದು ಪಾತ್ರಗಳು ನಮ್ಮ ಬದುಕಿಗೆ ಅನ್ವಯವಾಗುವಂಥದ್ದು. ನಳ ದಮಯಂತಿಯ ಕಥೆಯಲ್ಲಿ ಹೆಣ್ಣೊಬ್ಬಳು ಯಾವ ರೀತಿ ಜೀವನ ನಡೆಸಿದ್ದಾಳೆ ಎನ್ನುವುದು ಅರ್ಥವಾಗುತ್ತದೆ. ಅದನ್ನು ನಮ್ಮ ಬದುಕಿನಲ್ಲೂ ಕೂಡ ಅಳವಡಿಸಿಕೊಂಡಾಗ ಜೀವನದಲ್ಲಿ ಎಲ್ಲಾ ರೀತಿಯಲ್ಲೂ ಕೂಡ ಸುಖ ಶಾಂತಿ ಸಾಧ್ಯವಾಗುತ್ತದೆ, ಬದುಕಿನಲ್ಲಿ ಪ್ರತಿಯೊಬ್ಬರನ್ನೂ ಕೂಡ ಪ್ರೀತಿಸಿ ಗೌರವದಿಂದ ನೋಡಿಕೊಳ್ಳಿ. ಅದರಿಂದ ನಾವು ಉನ್ನತ ಮಟ್ಟಕ್ಕೆ ಏರಲು ಸಾಧ್ಯವಾಗುತ್ತದೆ. ಯಾರನ್ನೂ ದ್ವೇಷ ಮಾಡಬಾರದು. ಪ್ರತಿಯೊಬ್ಬರೂ ಬೇರೆ ಕ್ಷಣಗಳಲ್ಲಿ ನಮಗೆ ಸಹಾಯ ಸಹಕಾರವನ್ನು ಮಾಡಲು ಸಾಧ್ಯ. ಯಕ್ಷಗಾನ ಪ್ರಸಂಗದಲ್ಲಿ ಬರುವ ಪ್ರತಿಯೊಂದು ಪಾತ್ರಗಳು ನಮ್ಮ ಜೀವನಕ್ಕೆ ಪಾಠವಾಗಿದೆ ಎಂದು ನುಡಿದರು.
ಕಾರ್ಯಕ್ರಮವನ್ನು ರಘುನಾಥ್ ಎನ್ ಶೆಟ್ಟಿ ನಿರೂಪಿಸಿ ಧನ್ಯವಾದ ಸಮರ್ಪಿಸಿದರು. ವಿಶೇಷ ಅತಿಥಿಗಳನ್ನು ಪ್ರಾದೇಶಿಕ ಸಮಿತಿಯ ಕಾರ್ಯ ಅಧ್ಯಕ್ಷ ನಿಟ್ಟೆ ಎಂಜಿ ಶೆಟ್ಟಿ ಮತ್ತು ಪದಾಧಿಕಾರಿಗಳು ಹೂಗುಚ್ಚ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ತಾಳಮದ್ದಳೆಯನ್ನು ಪ್ರದರ್ಶನ ಮಾಡಲು ಅವಕಾಶ ಮಾಡಿಕೊಟ್ಟ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳನ್ನು ಅಜೆಕಾರು ಅಭಿಮಾನಿ ಬಳಗದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಜೆಕಾರು ಗೌರವಿಸಿದರು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಯಕ್ಷಗಾನ ಕಲಾಭಿಮಾನಿಗಳು ಪಾಲ್ಗೊಂಡಿದ್ದರು.