ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ, ಆರ್ಯಾಪು ಗ್ರಾಮದ ಸಂಪ್ಯ ಕಂಬಳತ್ತಡ್ಡ ನಿವಾಸಿ ಸೀತಾರಾಮ ಶೆಟ್ಟಿ (47) ಆ.23ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ನೈತ್ತಾಡಿಯ ಕಲ್ಲಗುಡ್ಡೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಲೀಸ್ ಆಧಾರದಲ್ಲಿ ನಡೆಸುತ್ತಿದ್ದ ಸೀತಾರಾಮ ಶೆಟ್ಟಿ ಅವರು ಬುಧವಾರ ಬೆಳಗ್ಗೆ ರೆಸ್ಟೋರೆಂಟ್ಗೆ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ತತ್ಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಪುತ್ತೂರು ಯುವ ಬಂಟರ ಸಂಘದ ಅಧ್ಯಕ್ಷರಾಗಿ, ಸಂಪ್ಯ ನವಚೇತನ ಯುವಕ ಮಂಡಲದ ಅಧ್ಯಕ್ಷರಾಗಿದ್ದ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.