ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಹಸಿ ತ್ಯಾಜ್ಯದಿಂದ ಬಯೋ ಸಿ.ಎನ್.ಜಿ. ಉತ್ಪಾದನೆ ಮಾಡುವ ಘಟಕ ಒಡ್ಡೂರು ಎನರ್ಜಿಯನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್, ಸಂಸದ ನಳಿನ್ ಕುಮಾರ್ ಕಟೀಲ್,ಮಂಗಳೂರು ಉತ್ತರ ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ,ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಉಪಸ್ಥಿತರಿದ್ದರು. ಬಯೋ ಗ್ಯಾಸ್ ಉತ್ಪಾದನೆ, ಗೊಬ್ಬರ ಉತ್ಪಾದನೆಗೆ ಸಬ್ಸಿಡಿ, ಸವಲತ್ತು ನೀಡಲಾಗುವುದು, ಅವುಗಳನ್ನು ಬ್ರಾಂಡಿಂಗ್ ಮಾಡುವ ಕಾರ್ಯಕ್ಕೆ ಕೇಂದ್ರ ಪ್ರೋತ್ಸಾಹ ನೀಡಲಿದೆ.