ಬಂಟರ ಚಾವಡಿ ಪರ್ಕಳ (ರಿ) ಇದರ ಮುಂದಾಳತ್ವದಲ್ಲಿ ಮುಂಬಯಿಯ ಆಲ್ ಕಾರ್ಗೋ ಲಾಜಿಸ್ಟಿಕ್ ನವರು ಕೊಡಮಾಡುವ ದಿಶಾ ವಿದ್ಯಾರ್ಥಿವೇತನ ಸಮಾರಂಭವು ಪರ್ಕಳ ಸುರಕ್ಷಾ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ತಾರಾನಾಥ ಹೆಗ್ಡಯವರ ಅಧ್ಯಕ್ಷತೆಯಲ್ಲಿ ಬಹಳ ಅಚ್ಚುಕಟ್ಟಾಗಿ ಜರಗಿತು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಉಡುಪಿ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ಮತ್ತು ಶ್ರೀ ಸವಿಸ್ತಾರ ಆಳ್ವ (senior Executive, Allcargo Logistics Ltd) ಉಪಸ್ಥಿತರಿದ್ದರು. ವಿವಿಧ ಶಾಲೆಯ 350 ವಿದ್ಯಾರ್ಥಿಗಳಿಗೆ ಸುಮಾರು 13,00,000 ರೂಪಾಯಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷ ಶ್ರೀ ಜಯರಾಜ್ ಹೆಗ್ಡೆ, ಕಾರ್ಯಧ್ಯಕ್ಷ ಶ್ರೀ ವಸಂತ ಶೆಟ್ಟಿ ಚೆನ್ನಿಬೆಟ್ಟು, ಪ್ರಧಾನ ಕಾರ್ಯದರ್ಶಿ ಶ್ರೀ ವಸಂತ ಶೆಟ್ಟಿ ಹಿರೇಬೆಟ್ಟು, ಕೋಶಾಧಿಕಾರಿ ಶ್ರೀ ದಿನಕರ ಶೆಟ್ಟಿ ಹೆರ್ಗ, ಸಂಘಟನಾ ಕಾರ್ಯದರ್ಶಿ ಶುಭಕರ ಶೆಟ್ಟಿ ಕಬ್ಯಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳಿಂದ ‘ನಶಮುಕ್ತ ಭಾರತ’ ಪ್ರತಿಜ್ಞೆಯನ್ನು ಮಾಡಿಸಿದರು. ಕೋಶಾಧಿಕಾರಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಹಿರೇಬೆಟ್ಟು ಧನ್ಯವಾದವನ್ನು ಅರ್ಪಿಸಿದರು.