ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಹೆಬ್ರಿ ಬಂಟರ ಸಂಘದ ಅಧ್ಯಕ್ಷ, ಯೋಗಪಟು ಸೀತಾನದಿ ವಿಠ್ಠಲ್ ಶೆಟ್ಟಿಯವರಿಗೆ ಅಮೃತ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಬ್ರಿ ತಾಲೂಕು ಕ್ರೀಡಾ ಭಾರತಿ ಗೌರವ ಅಧ್ಯಕ್ಷರಾದ ಗುರುದಾಸ್ ಶೆಣೈ, ಅಂತಾರಾಷ್ಟ್ರೀಯ ಕ್ರೀಡಾಪಟು ಉದಯಕುಮಾರ್ ಶೆಟ್ಟಿ, ಪ್ರಿನ್ಸಿಪಾಲ್ ಅಮರೇಶ್ ಶೆಟ್ಟಿ, ಆಡಳಿತಾಧಿಕಾರಿ ರಾಘವೇಂದ್ರ, ಕ್ರೀಡಾ ಭಾರತಿ ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.