ಸೆ. 04 ಬ್ರಹ್ಮಾವರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾದ ದಿ. ಎನ್ ಎಸ್ ಅಡಿಗರವರ ದಿವ್ಯಾತ್ಮಕ್ಕೆ ಶಾಂತಿಕೋರಲು ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ್ದ ಎನ್. ಎಸ್. ಅಡಿಗರು, ಸರಳ ಸಜ್ಜನಿಕೆ, ನಗು ಮುಖದೊಂದಿಗೆ ಸಹಸ್ರಾರು ವಿಧ್ಯಾರ್ಥಿಗಳಿಗೆ ಜ್ಞಾನದ ಸುಧೆಯನ್ನು ಹರಿಸಿದ್ದಾರೆ. ಅವರ ಅಪಾರ ಭಾಷಾ ಪಾಂಡಿತ್ಯ, ಕೆಲಸದಲ್ಲಿ ಲವಲವಿಕೆಯಿಂದ ತೊಡಗಿಕೊಳ್ಳುತ್ತಿದ್ದ ಪರಿ ನಮಗೆಲ್ಲರಿಗೂ ಆದರ್ಶವೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಅಡಿಗರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಾವುಕರಾಗಿ ಮಾತನಾಡಿ ಶಿಸ್ತಿಗೆ, ಪರಿಪೂರ್ಣತೆಗೆ ಇನ್ನೊಂದು ಹೆಸರೇ ಅಡಿಗರು. ಅವರು ನನ್ನ ಗುರುಗಳು, ಮಾರ್ಗದರ್ಶಕರೂ ಆಗಿದ್ದರು ಎಂದರು. ನಂತರ ಜಿ ಎಮ್ ಸಂಸ್ಥೆಯನ್ನು ಕಟ್ಟುವಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಿ ನಾವೆಲ್ಲರೂ ಅವರ ಆದರ್ಶಗಳನ್ನು, ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಹ ಸಿಬ್ಬಂದಿವೃಂದ ತಮ್ಮ ಭಾರವಾದ ಮನಸ್ಸಿನಿಂದ ಅನಿಸಿಕೆಗಳನ್ನು ಹಂಚಿಕೊಂಡರು. ಸಭೆಯಲ್ಲಿ ಜಿ ಎಮ್ ಗ್ಲೋಬಲ್ ಸ್ಕೂಲ್ ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ, ಟ್ರಾನ್ಸ್ಪೆÇೀರ್ಟ್ ಮ್ಯಾನೇಜರ್ ತ್ಯಾಗೀಶ್ಚಂದ್ರ ಶೆಟ್ಟಿ, ಶಿಕ್ಷಕವೃಂದ, ಸಹಸಿಬ್ಬಂದಿ ವರ್ಗ, ಸಹಸ್ರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಮೌನ ಪ್ರಾರ್ಥನೆಯೊಂದಿಗೆ ಅಗಲಿದ ಆತ್ಮಕ್ಕೆ ಸಂತಾಪ ಸೂಚಿಸಿದರು.