ಕ್ರೀಡೆಯಲ್ಲಿ ತೊಡಗಿಕೊಂಡಾಗ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು. ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳನ್ನು ಪ್ರೋತ್ಸಾಹಿಸುವುದು ಅಗತ್ಯ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ತಿಳಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ, ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆದ ಬಂಟ ಕ್ರೀಡೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಮಟ್ಟದ ಬಾಕ್ಸಿಂಗ್ ಪಟು ಶಾರ್ವಿ ಶೆಟ್ಟಿ ಅವರು ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ನಾಗರಾಜ ಶೆಟ್ಟಿ, ಸಂಚಾಲಕರಾದ ವಸಂತ ಶೆಟ್ಟಿ, ಉಲ್ಲಾಸ್ ಆರ್ ಶೆಟ್ಟಿ, ಸುಧಾಕರ ಎಸ್ ಪೂಂಜ, ಜಯರಾಮ ಸಾಂತ, ಆಶಾ ಜ್ಯೋತಿ ರೈ, ಕ್ರೀಡಾ ಕೂಟ ಆಯೋಜಕರಾದ ಕಿರಣ್ ಪಕ್ಕಳ, ನಿವೇದಿತ ಎನ್ ಶೆಟ್ಟಿ, ನಂದ ಕಿಶೋರ್ ಶೆಟ್ಟಿ, ಮೀನಾ ರಘು ಶೆಟ್ಟಿ, ಸುಲತಾ ಶೆಟ್ಟಿ, ಪ್ರತಿಮಾ ಶೆಟ್ಟಿ, ಅಕ್ಷತಾ ಶೆಟ್ಟಿ ಎಡ್ಮೆಮಾರ್, ಮನೀಶ್ ಶೆಟ್ಟಿ, ಕಿಶೋರ್ ಭಂಡಾರಿ, ಆಶ್ವತ್ತಾಮ ಶೆಟ್ಟಿ, ದಯಾನಂದ ಮಾಡ, ಸುಜಾತ ಶೆಟ್ಟಿ, ರಿತೇಶ್ ಶೆಟ್ಟಿ, ಮಲ್ಲಿಕ ಭಂಡಾರಿ, ಸತೀಶ್ ಭಂಡಾರಿ, ವರುಣ್ ಶೇಣವ, ಸಚಿನ್ ಆಳ್ವ, ನರೇಶ್ ಆಳ್ವ, ಸದಾಶಿವ ಶೆಟ್ಟಿ, ಕೃಷ್ಣ ಶೆಟ್ಟಿ, ಚಿತ್ರಾ ಜೆ ಶೆಟ್ಟಿ ಸುರತ್ಕಲ್, ಭವ್ಯಾ ಎ ಶೆಟ್ಟಿ ಸುರತ್ಕಲ್, ಮಾಲತಿ ಜೆ ಶೆಟ್ಟಿ ಸುರತ್ಕಲ್, ಸವಿತಾ ಬಿ ಶೆಟ್ಟಿ ಸುರತ್ಕಲ್ ಮೊದಲಾದವರು ಉಪಸ್ಥಿತರಿದ್ದರು. ಬಂಟ ಕ್ರೀಡೋತ್ಸವದ ಸಂಚಾಲಕ ಕಿರಣ್ ಪಕ್ಕಳ ಸ್ವಾಗತಿಸಿ, ಸಂಚಾಲಕಿ ಎನ್ ನಿವೇದಿತಾ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಕಾರ್ಯಕ್ರಮ ನಿರ್ವಹಿಸಿದರು.