ಹೊಸತನ್ನು ಕಲಿಯುವ, ಸಾಧಿಸುವ ಹಂಬಲವಿರುವವರಿಗೆ ಕೃತಕ ಬುದ್ಧಿಮತ್ತೆ ಹೊಸ ಹೊಸ ಉದ್ಯೋಗಾವಕಾಶ ನೀಡಬಲ್ಲುದು ಎಂದು ನಿಟ್ಟೆ ಜಸ್ಟಿಸ್ ಕೆ. ಎಸ್. ಹೆಗ್ಡೆ ಮ್ಯಾನೇಜ್ ಮೆಂಟ್ ಸಂಸ್ಥೆಯ ಪ್ಲೇಸ್ ಮೆಂಟ್ ಮತ್ತು ಅಡ್ಮಿಷನ್ ಮುಖ್ಯಸ್ಥ ಗುರುಪ್ರಶಾಂತ್ ಭಟ್ ಹೇಳಿದರು.
ಕುಂತಳನಗರ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸಂಘದ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಸಾಕ್ಷಾತ್ಕಾರ ತರಬೇತಿ ಕಾರ್ಯಕ್ರಮದ 11ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಹಾಗೂ 12ನೇ ಬ್ಯಾಚಿನ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂಬಯಿ ಉದ್ಯಮಿ ಮಧುಕರ ಶೆಟ್ಟಿ, ಬೆಳ್ಮಣ್ ಹ್ಯುಮ್ಯಾನಿಟಿ ಸಂಸ್ಥೆಯ ನವೀನ್, ಮೈಸ್ ಸಂಸ್ಥೆಯ ಆಡಳಿತಾಧಿಕಾರಿ ಗಾಯತ್ರಿ ಉಡುಪ, ಉಡುಪಿ ಗ್ರಾಮೀಣ ಬಂಟರ ಸಂಘದ ನೂತನ ಅಧ್ಯಕ್ಷ ಡಾ. ಎಚ್. ಬಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಜಿತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ರಂಜಿನಿ ಹೆಗ್ಡೆ, ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಪ್ರೋಗ್ರಾಂ ಕೋ – ಆರ್ಡಿನೇಟರ್ ಪದ್ಮನಾಭ ಹೆಗ್ಡೆ, ಸಂಘದ ಟ್ರಸ್ಟಿಗಳಾದ ಗೋಪಾಲ ಶೆಟ್ಟಿ, ದಯಾನಂದ ಶೆಟ್ಟಿ ಕಲ್ಮಂಜೆ, ರಮೇಶ್ ಶೆಟ್ಟಿ ನಿಂಜೂರು, ಹರೀಶ್ ಶೆಟ್ಟಿ ಬೆಳ್ಳೆ, ಕಂಪ್ಯೂಟರ್ ತರಬೇತುದಾರ ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವಿಜಿತ್ ಕುಮಾರ್ ಶೆಟ್ಟಿ ವಂದಿಸಿದರು. ನಿಟ್ಟೆ ವಿವಿಯ ವಿಸಿಟಿಂಗ್ ಪ್ರೊಫೆಸರ್ ದಿವ್ಯಾರಾಣಿ ಪ್ರದೀಪ್ ನಿರೂಪಿಸಿದರು.