ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್, ಕಟಪಾಡಿ ಗ್ರಾಮ ಪಂಚಾಯತ್, ಡಾ. ಶ್ರೀ ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನ ವತಿಯಿಂದ ಇಂದು ದಿನಾಂಕ 01-10-2023 ರಂದು ಕಟಪಾಡಿ ಪೇಟೆ ಬಳಿ ಹಮ್ಮಿಕೊಳ್ಳಲಾದ “ಸ್ವಚ್ಛತಾ ಹೀ ಸೇವಾ ಅಭಿಯಾನ”ಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಬಿ ಶೆಟ್ಟಿ, ಉಪಾಧ್ಯಕ್ಷರಾದ ಸುಗುಣಾ, ಕಟಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಮತಾ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಸ್ಥಳೀಯರು ಉಪಸ್ಥಿತರಿದ್ದರು.