ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ದಿನಾಂಕ 28.10.2023ರಂದು “ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾ ಕೂಟ” ಮತ್ತು ದಿನಾಂಕ 29.10.2023 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ “ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮಗಳ ಕುರಿತ ಎಂಟನೇ ಪೂರ್ವಭಾವಿ ಸಭೆಯು ದಿನಾಂಕ 04/10/2023 ರಂದು ಬಂಟರ ಸಂಘ ಪುಣೆಯ ಸಭಾಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಜರಗಿತು.
ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದ ಕರಪತ್ರವನ್ನು ಬಂಟರ ಸಂಘ ಪುಣೆಯ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟುರವರು ಅನಾವರಣಗೊಳಿಸಿದರು. ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಸಲಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಹಾಗೂ ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳಲ್ಲಿ ಬಂಟ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಬೇಕೆಂದು ಪುಣೆ ಬಂಟರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿಕೊಂಡರು.
ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು, ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು, ಕೋಶಾಧಿಕಾರಿ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿ, ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿ, ಒಕ್ಕೂಟದ ಪೋಷಕ ಸದಸ್ಯರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳಾರ್, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು,ಉಪಾಧ್ಯಕ್ಷ ಶ್ರೀ ಚಂದ್ರಹಾಸ್ ಶೆಟ್ಟಿ ಎರ್ಮಾಳ್, ಗೌರವ ಕಾರ್ಯದರ್ಶಿ ಶ್ರೀ ಅಜಿತ್ ಹೆಗ್ಡೆ, ಕೋಶಾಧಿಕಾರಿ ಶ್ರೀ ಸತೀಶ್ ಶೆಟ್ಟಿ ಪುಣೆ, ಪಿಂಪ್ರಿ ಚಿಂಚ್ವಾಡದ ಅಧ್ಯಕ್ಷರು ಶ್ರೀ ರಾಕೇಶ್ ಎ.ಶೆಟ್ಟಿ ಬೆಳ್ಳಾರೆ, ಬಂಟ್ಸ್ ಅಸೋಸಿಯೇಷನ್ ಪುಣೆಯ ಅಧ್ಯಕ್ಷರಾದ ಶ್ರೀ ಗಣೇಶ್ ಹೆಗ್ಡೆ, ಪೂನಾಗೇಟ್ ಹೋಟೆಲ್ ನ ಮಾಲಕರಾದ ಶ್ರೀ ಬಾಲಚಂದ್ರ ಶೆಟ್ಟಿ ಎರ್ಮಾಳ್, ಶ್ರೀ ಅಶೋಕ್ ಪಕ್ಕಳ ಮುಂಬಯಿ, ಶ್ರೀ ವಿಜಯ ಶೆಟ್ಟಿ, ಶ್ರೀ ಜಗದೀಶ್ ಶೆಟ್ಟಿ, ಶ್ರೀ ಪ್ರಶಾಂತ್ ಶೆಟ್ಟಿ, ಶ್ರೀ ಗಣೇಶ್ ಶೆಟ್ಟಿ, ಬಂಟರ ಸಂಘ ಪುಣೆಯ ಮಹಿಳಾ ವಿಭಾಗದ ಸದಸ್ಯರು ಹಾಗೂ ಇನ್ನಿತರ ಸದಸ್ಯರುಗಳು ಉಪಸ್ಥಿತರಿದ್ದರು.