ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 24, 25 ಹಾಗೂ 26ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಹಾಗೂ ಇತಿಹಾಸ ಪ್ರಸಿದ್ಧ ನಮ್ಮ ಕಂಬಳ ಕಾರ್ಯಕ್ರಮದ ಪೂರ್ವಭಾವಿ ಸಭೆ ಪುತ್ತೂರಿನ ಶಾಸಕ ಶ್ರೀ ಅಶೋಕ್ ರೈ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಅಶೋಕ್ ರೈ ಅವರು ಮಾತನಾಡಿ, ಕರಾವಳಿ ಭಾಗದಲ್ಲಿ ಮಾತ್ರ ನಡೆಯುತ್ತಿದ್ದ ನಮ್ಮ ಕಂಬಳವನ್ನು ಪ್ರಪ್ರಥಮ ಬಾರಿಗೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಆಯೋಜನೆ ಮಾಡಿದ್ದೇವೆ. ಕಂಬಳವನ್ನು ಯಶಸ್ವಿಗೊಳಿಸೋಣ. ಸರ್ವರ ಸಹಕಾರ ಅತ್ಯಗತ್ಯ ಎಂದರು.
ಈ ಸಂಧರ್ಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಶ್ರೀ ಎಂ ಮುರಳೀಧರ್ ಹೆಗ್ಡೆ, ಜಯಕರ್ನಾಟಕ ಸಂಘಟನೆಯ ಶ್ರೀ ಗುಣರಂಜನ್ ಶೆಟ್ಟಿ, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರ್ ರಾಜ್ ರೈ, ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಹಾಗೂ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಗುರುಕಿರಣ್ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಿರಿಯರು ಹಾಗೂ ಕಂಬಳದ ಅಭಿಮಾನಿಗಳು ಉಪಸ್ಥಿತರಿದ್ದರು.