ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅಕ್ಟೋಬರ್ 28ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅಕ್ಟೋಬರ್ 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಅಕ್ಟೋಬರ್ 11ರಂದು ಸಂಜೆ 4 ಗಂಟೆಗೆ “ಸಿಲ್ವರ್ ಬಿಲ್ಸ್ ಹಾಲ್ ಗೋಲ್ಡ್ ಪಿಂಚ್ ಹೋಟೆಲ್, ಬಂಟ್ಸ್ ಹಾಸ್ಟೆಲ್ ಇಲ್ಲಿ ಜರಗಲಿರುವುದು.
ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಡಾ. ಎ. ಜೆ. ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.