ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮಂಗಳೂರು ಇದರ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನ -2023 ರ ಪ್ರಯುಕ್ತ ಅಕ್ಟೋಬರ್ 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅಕ್ಟೋಬರ್ 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರವನ್ನು ದುಬೈಯಲ್ಲಿ ಬಿಡುಗಡೆಗೊಳಿಸಲಾಯಿತು.

ದುಬೈನಲ್ಲಿ ಅಕ್ಟೋಬರ್ 8 ರಂದು ನಡೆದ ತ್ರಿರಂಗ ಸಂಗಮ ಮುಂಬಯಿಯ ಪ್ರಥಮ ವಾರ್ಷಿಕೋತ್ಸವ ಮತ್ತು ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ “ತ್ರಿರಂಗ ಸುವರ್ಣ ಮೋಹನ ಸಂಭ್ರಮ”ದ ಶುಭ ಸಮಾರಂಭದ ವೇದಿಕೆಯಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಯು.ಎ.ಇ.ಬಂಟ್ಸ್ ನ ಅಧ್ಯಕ್ಷರಾದ ಸರ್ವೋತಮ ಶೆಟ್ಟಿ ಹಾಗೂ ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ಮಹಾ ಪೋಷಕರಾದ ಬಿ. ವಿವೇಕ್ ಶೆಟ್ಟಿ ಮುಂಬೈ, ಪೋಷಕರಾದ ರವೀಂದ್ರನಾಥ್ ಭಂಡಾರಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಅರುಣೋದಯ ಎಸ್. ರೈ, ಸಾಂಸ್ಕೃತಿಕ ಸಮಿತಿಯ ಸಹ ಸಂಚಾಲಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬೈ, ನವೀನ್ ಶೆಟ್ಟಿ ಇನ್ನಾ ಬಾಳಿಕೆ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಅಶೋಕ್ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.
ವಿಜಯಕುಮಾರ್ ಶೆಟ್ಟಿ ದುಬೈ







































































































