ಮಂಗಳೂರು ಮಹಾನಗರಪಾಲಿಕೆಯ ಗುತ್ತಿಗೆದಾರರ ಕುಂದು ಕೊರತೆ ಮತ್ತು ಸಮಸ್ಯೆಯನ್ನು ಪರಿಶೀಲಿಸಲು ಮಹಾನಗರಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಯಿತು.

ಸಭೆಯಲ್ಲಿ ಗುತ್ತಿಗೆದಾರರಿಗಾಗುವ ಸಮಸ್ಯೆಯನ್ನು ಕೇಳಿ ಇದಕ್ಕೆ ಸಮಜಾಯಿಷಿಕೆಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ, ಅದರಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಡುವೆ ಹಲವು ವಿಷಯಗಳ ಚರ್ಚೆ ನಡೆದಿದ್ದು ಹಲವಾರು ನ್ಯೂನತೆಗಳನ್ನು ಸರಿಪಡಿಸಲು ಸೂಕ್ತ ಕ್ರಮ ಜರುಗಿಸಲು ಆದೇಶಿಸಲಾಯಿತು.

ಸಭೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರ್, ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಟ್ಟಣ ಯೋಜನೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೋಹಿತ್ ಅಮೀನ್, ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ವರುಣ್ ಚೌಟ, ವಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ ಮತ್ತು ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.







































































































