ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ‘ವಿಶ್ವ ಬಂಟರ ಸಮ್ಮೇಳನ -2023’ ರ ಪ್ರಯುಕ್ತ ಅ.28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ‘ವಿಶ್ವ ಬಂಟರ ಕ್ರೀಡಾ ಕೂಟ ‘ ಹಾಗೂ ಅ.29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ಒಕ್ಕೂಟದಿಂದ ಅ.28 ರಂದು ಶನಿವಾರ ಮತ್ತು ಅ.29 ರಂದು ರವಿವಾರ ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾ ಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರಗಲಿದ್ದು, ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಅಂತಾರಾಷ್ಟ್ರೀಯ ಮಟ್ಟದ ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ತಾರೆಯರು, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಹೀಗೆ ಎಲ್ಲಾ ವರ್ಗದ ಜನರು ಒಂದೆಡೆ ಸೇರುವ ಅಪರೂಪದ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 28 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಾಧಕರುಗಳಾದ ಶ್ರೀದೇವಿ ಎಜ್ಯುಕೇಶನ್ ಟ್ರಸ್ಟಿನ ಡಾ. ಎ ಸದಾನಂದ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕಿನ ಆಡಳಿತ ನಿರ್ದೇಶಕ ಡಾ. ಎಂ ಎನ್ ರಾಜೇಂದ್ರಕುಮಾರ್, ಕೆ. ಪ್ರಕಾಶ್ ಶೆಟ್ಟಿ ಎಂ ಆರ್ ಜಿ ಗ್ರೂಪ್, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗಲ್ಫ್ ರಾಷ್ಟ್ರದ ಉದ್ಯಮಿ ಪ್ರವೀಣ್ ಶೆಟ್ಟಿ ವಕ್ವಾಡಿ, ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಂಸ್ಥಾಪಕ ಸತೀಶ್ ಶೆಟ್ಟಿ ಪಟ್ಲ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಬಾಳಿಕೆ, ಅಂತಾರಾಷ್ಟ್ರೀಯ ಕ್ರೀಡಾಪಟು ಚಿರಾಗ್ ಶೆಟ್ಟಿ ಇವರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ, ಸಂಚಾಲಕರು ಸಾಂಸ್ಕೃತಿಕ ಸಮಿತಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಮತ್ತು ಕ್ರೀಡಾ ಸಮಿತಿ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ ಹಾಗೂ ಸರ್ವ ಸದಸ್ಯರು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇವರುಗಳು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.