ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಶಿರ್ವದ ವಿದ್ಯಾವರ್ಧಕ ಸಂಘದ ಕ್ಯಾಂಪಸ್ ನಲ್ಲಿ 2 ಕೋ. ರೂ. ವೆಚ್ಚದಲ್ಲಿ ನಿರ್ಮಿಸಿ ನಿರ್ವಹಿಸಲ್ಪಡುವ ಜಸ್ಟಿಸ್ ಕೆ. ಎಸ್. ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದ ಉದ್ಘಾಟನೆ ಅ.20 ರಂದು ಬೆಳಗ್ಗೆ 10 ಗಂಟೆಗೆ ಜರಗಲಿದೆ. ಸರ್ವೋಚ್ಚ ನ್ಯಾಯಾಲಯದ ನಿವೃತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಲಿದ್ದು ನಿಟ್ಟೆ ವಿ. ವಿ. ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಶಾಸಕ ಸುರೇಶ್ ಪಿ. ಶೆಟ್ಟಿ ಗುರ್ಮೆ, ನಿಟ್ಟೆ ವಿ. ವಿ. ಸಹಕುಲಾಧಿಪತಿಗಳಾದ ಡಾ. ಎಂ. ಶಾಂತಾರಾಮ ಶೆಟ್ಟಿ, ವಿಶಾಲ್ ಹೆಗ್ಡೆ, ಕುಲಪತಿ ಡಾ. ಎಂ. ಎಸ್. ಮೂಡಿತ್ತಾಯ, ಉಪಾಧ್ಯಕ್ಷ (ಸಿಆರ್ ಎಲ್ ಮತ್ತು ಐ ಎಸ್ ಆರ್) ಡಾ. ಸತೀಶ್ ಕುಮಾರ್ ಭಂಡಾರಿ ಹಾಗೂ ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್ ಭಾಗವಹಿಸಲಿದ್ದಾರೆ. ಗ್ರಾಮೀಣ ಅರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯ ಸೇವೆಗಳು ಲಭಿಸಿದ್ದು, ಕೆಲವು ಸೇವೆಗಳು ಮತ್ತು ಔಷಧ ಉಚಿತವಾಗಿ ದೊರೆಯಲಿದೆ.
ವಿನಯಾಭಿವಂದನೆ :
ನಿಟ್ಟೆ ವಿ.ವಿ. ಕುಲಾಧಿಪತಿಗಳಾಗಿ, ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾಗಿ, ಕೈಗಾರಿಕೋದ್ಯಮಿಯಾಗಿ, ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ವಿವಿಧ ಕ್ಷೇತ್ರಗಳಲ್ಲಿ 6 ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಎನ್. ವಿನಯ ಹೆಗ್ಡೆ ಅವರಿಗೆ ಶಿರ್ವ ವಿದ್ಯಾವರ್ಧಕ ಸಂಘದ ವತಿಯಿಂದ ಸಮ್ಮಾನ “ವಿನಯಾಭಿವಂದನೆ” ಇದೇ ವೇಳೆ ಜರಗಲಿದೆ. ಸುರೇಶ್ ಪಿ. ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಡಾ. ಎಂ. ಶಾಂತಾರಾಮ ಶೆಟ್ಟಿ, ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.