ಬಂಟರು ಹೋಟೆಲ್ ಉದ್ಯಮ ಜೊತೆಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನ ಸ್ವಂತ ಪರಿಶ್ರಮದಿಂದ ಯಶಸ್ವಿಯಾಗಿದ್ದಾರೆ. ಇಂತಹ ಕಾರ್ಯಕ್ರಮದಿಂದ ನಮ್ಮವರಿಗೆ ಅವಕಾಶ ಹಾಗೂ ಪ್ರೋತ್ಸಾಹದ ವೇದಿಕೆ ನಿರ್ಮಾಣವಾಗುತ್ತದೆ ಎಂದು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಹೇಳಿದರು. ಇವರು ಬಂಟರ ಸಂಘದ ಎಸ್. ಎಂ. ಶೆಟ್ಟಿ ಸಭಾಂಗಣದಲ್ಲಿ ಜರುಗಿದ ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಂಘದಿಂದ ಸಂಘಟನೆ, ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದರ್ಶನಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಎಲ್ಲಾ ಬಂಧುಗಳು ಸೇರಿ ಸದುಪಯೋಗ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ದಿನ ಪೂರ್ತಿ ಜರುಗಿದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿಯವರ ಪತ್ನಿ ಶುಭ ಸಿ. ಶೆಟ್ಟಿ ಬೆಳಗ್ಗೆ ರಿಬ್ಬನ್ ಕತ್ತರಿಸುವುದರೊಂದಿಗೆ ಉದ್ಘಾಟನೆ ಮಾಡಿ ಮಹಿಳೆಯರು ಅಯೋಜಿಸುವ ಇಂತಹ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರವಿರಲಿ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಅನಿತಾ ಆರ್.ಕೆ. ಶೆಟ್ಟಿ ಮಾತನಾಡಿ, ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂತೋಷವಾಗುತ್ತದೆ. ನಾವೆಲ್ಲರೂ ಜೊತೆ ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು. ಈ ಸಂದರ್ಭದಲ್ಲಿ ಅತಿಥಿಯಾಗಿ ಉಪಸ್ಥಿತರಿದ್ದ ಅನಸೂಯ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದ ಬಂಟರ ಸಂಘದ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಪ್ರಚಾರ ಬಹಳ ಮುಖ್ಯ. ಎಷ್ಟು ಪ್ರಚಾರ ಮಾಡುತ್ತೇವೆ ಅಷ್ಟೇ ಪ್ರಸಿದ್ಧಿಯನ್ನು ಪಡೆಯುತ್ತದೆ. ಅತೀ ಹೆಚ್ಚು ಜನರು ಬರುತ್ತಾರೆ. ಇದರಿಂದ ಸಂಘಟಕರಿಗೆ ಹಾಗೂ ಪ್ರದರ್ಶನದ ಮಾರಾಟಗಾರರಿಗೆ ಅನುಕೂಲಕರವಾಗುತ್ತದೆ. ಬಂಟರ ಸಂಘಕ್ಕೆ ನನ್ನ ಸಹಕಾರ ಸದಾಕಾಲವೂ ಇರುತ್ತದೆ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಬಂಟರ ಸಂಘ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ. ಶೆಟ್ಟಿ ಮಾತನಾಡಿ, ಸಮಾಜದ ಏಳಿಗೆಗಾಗಿ ಉತ್ತಮ ಕೆಲಸವನ್ನು ಮಾಡುತ್ತಿರುವ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಆರಂಭವಾದ ದಿನದಿಂದ ಇಂದಿನವರೆಗಿನ ಕಾರ್ಯಧ್ಯಕ್ಷರ ಹಾಗೂ ಸಮಿತಿ ಸದಸ್ಯರ ಕೊಡುಗೆ ಅಪಾರವಾಗಿದೆ. ಪ್ರಸ್ತುತ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ವಜ್ರಾಕ್ಷಿ ಪೂಂಜ ತಂಡದ ಸಮಾಜಪರ ಕಾರ್ಯಗಳು ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದರು.
ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿ, ಸಮಿತಿಯ ಎಲ್ಲರ ಸಹಕಾರದಿಂದ ಪ್ರತಿಯೊಂದು ಕಾರ್ಯಕ್ರಮ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ನಿಮ್ಮೆಲರ ಸಹಕಾರ ಹೀಗೆ ಇರಲಿ ಎಂದು ವಿನಂತಿಸಿದರು. ವೇದಿಕೆಯಲ್ಲಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಸಂಚಾಲಕ ನ್ಯಾಯವಾದಿ ಆರ್.ಜಿ. ಶೆಟ್ಟಿ, ಉಪಕಾರ್ಯಾಧ್ಯಕ್ಷರಾದ ಯಶವಂತ್ ಶೆಟ್ಟಿ, ರಮೇಶ್ ರೈ, ಕಾರ್ಯದರ್ಶಿ ಪ್ರಸಾದ್ ಶೆಟ್ಟಿ, ಸಲಹೆಗಾರ ಡಿ.ಕೆ. ಶೆಟ್ಟಿ, ಮಹಿಳಾ ವಿಭಾಗದ ವಜ್ರಾಕ್ಷಿ ಪೂಂಜ, ಸಂಚಾಲಕಿ ವನಿತಾ ನೋಂಡ, ಉಪಕಾರ್ಯಧ್ಯಕ್ಷೆ ವಂದನ ಶೆಟ್ಟಿ, ಕಾರ್ಯದರ್ಶಿ ಶೋಭ ಶೆಟ್ಟಿ, ಕೋಶಾಧಿಕಾರಿ ಭಾರತಿ ಶೆಟ್ಟಿ, ಜೊತೆ ಕಾರ್ಯದರ್ಶಿ ಪುಷ್ಪಲತ ಶೆಟ್ಟಿ, ಜೊತೆ ಕೋಶಾಧಿಕಾರಿ ಶೈಲಜ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಧ್ಯಕ್ಷೆ ಅನಿತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ ಶಿಪ್ ಪಡೆದ ಟಿಡಿಎಫ್ ಡೈಮಂಡ್ ನ ಮನೋಜ್ ಹಾಗೂ ಸುರಭಿ ಕಾಂಚಿಪುರಂ ಸಿಲ್ಕ್ ಸೀರೆಯ ಮೋಹಿನಿ ಆರ್. ಶೆಟ್ಟಿಯವರನ್ನು ಗೌರವಿಸಲಾಯಿತು. ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ವಜ್ರಾಕ್ಷಿ ಪೂಂಜ ಸ್ವಾಗತಿಸಿದರು. ಪ್ರಶಾಂತಿ ಡಿ .ಶೆಟ್ಟಿ ನಾನಯರ ಗರಡಿ ಪ್ರಾರ್ಥನೆಗೈದರು. ಮಹಿಳಾ ವಿಭಾಗದ ಕಾರ್ಯದರ್ಶಿ ಶೋಭ ಶೆಟ್ಟಿ ವಂದಿಸಿದರು. ಕಾರ್ಯಕ್ರಮವನ್ನು ಬಾಬಾ ಪ್ರಸಾದ್ ಅರಸ ಕುತ್ಯಾರ್ ನಿರೂಪಿಸಿದರು.