ಎಸ್. ಆರ್. ಹೆಗ್ಡೆ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್, ತುಳು ಪರಿಷತ್ ಮಂಗಳೂರು, ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಕನ್ನಡ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯ, ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಡಾ. ಇಂದಿರಾ ಹೆಗ್ಗಡೆ : ನೆಲ ಮೂಲದ ನಡೆ : ಶೋಧ -ಸ್ವಾಧ, ಸಂಶೋಧನೆ, ಸಾಹಿತ್ಯಾವಲೋಕನ, ರಾಜ್ಯಮಟ್ಟದ ವಿಚಾರಗೋಷ್ಠಿ ಕೃತಿ ಲೋಕಾರ್ಪಣೆ ಸಮಾರಂಭ ಅಕ್ಟೋಬರ್ 26ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3.30 ರವರೆಗೆ ನಗರದ ವೆಲೆನ್ಸಿಯಾದ ರೋಶನಿ ನಿಲಯದ ಮರಿಯಾ ಪೈವಾ ಸಭಾಂಗಣದಲ್ಲಿ ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳ್ಯಾರು ಮಾತನಾಡಿ, ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷ ಡಾ. ದೇವರಕೊಂಡಾ ರೆಡ್ಡಿ ಉದ್ಘಾಟಿಸಿ, ಲೋಕಾರ್ಪಣೆಗೊಳಿಸಲಿದ್ದಾರೆ. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ, ರೋಶನಿ ನಿಲಯದ ಪ್ರಾಂಶುಪಾಲೆ ಡಾ. ಸೋಫಿಯಾ ಎನ್. ಫೆರ್ನಾಂಡಿಸ್, ಎಸ್. ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಫ್ರೋ. ಪಿ. ಕೃಷ್ಣಮೂರ್ತಿ, ತುಳು ಪರಿಷತ್ ಗೌರವಾಧ್ಯಕ್ಷ ಡಾ. ಪ್ರಭಾಕರ ನೀರುಮಾರ್ಗ, ಆಕೃತಿ ಆಶಯ ಪಬ್ಲಿಕೇಶನ್ ನ ಕಲ್ಲೂರು ನಾಗೇಶ ಭಾಗವಹಿಸಲಿದ್ದಾರೆ. ಡಾ. ಜ್ಯೋತಿ ಚೇಳ್ಯಾರು ಸಂಪಾದಕರ ನುಡಿಗಳನ್ನಾಡಲಿದ್ದಾರೆ ಎಂದರು.
ಬೆಳಗ್ಗೆ 11.15 ರಿಂದ ಮಧ್ಯಾಹ್ನ 1.30 ರ ವರೆಗೆ ವಿಚಾರಗೋಷ್ಠಿ ನಡೆಯಲಿದೆ ಎಂದರು. ಪ್ರತಿಕಾಗೋಷ್ಠಿಯಲ್ಲಿ ಪ್ರಮುಖರಾದ ಫ್ರೋ. ಪಿ. ಕೃಷ್ಣಮೂರ್ತಿ, ತಾರಾನಾಥ ಗಟ್ಟಿ ಕಾಪಿಕಾಡ್, ಕಲ್ಲೂರು ನಾಗೇಶ, ಬೆನೆಟ್ ಜಿ. ಅಮ್ಮನ್ನ ಉಪಸ್ಥಿತರಿದ್ದರು.