ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನಲೆಯಲ್ಲಿ ಅಜ್ಜರಕಾಡು ಮೈದಾನದಲ್ಲಿನ ನಳಿನ ಬೋಜ ಶೆಟ್ಟಿ ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ ಬಂಟರ ಸಂಘಗಳು ವಿವಿಧ ಕ್ರೀಡೆಯಲ್ಲಿ ಪಾಲು ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು. ಬೆಳಗ್ಗಿನಿಂದ ತಡ ರಾತ್ರಿಯವರೆಗೆ ನಡೆದ ವಿವಿಧ ಕ್ರೀಡಾಕೂಟದಲ್ಲಿ ಮುಂಬಯಿ ಬಂಟರ ಸಂಘದ ಮೀರಾ ಭಾಯಿಂದರ್ ಪ್ರಾದೇಶಿಕ ಸಮಿತಿ ಕಾರ್ಯಧ್ಯಕ್ಷ ಮಾಣಿ ಗುತ್ತು ಶಿವಪ್ರಸಾದ್ ಶೆಟ್ಟಿ ಅವರ ನೇತೃತ್ವದ ತಂಡ ಎಲ್ಲಾ ಕ್ರೀಡೆಯಲ್ಲಿ ಪಾಲು ಪಡೆದು ಅತೀ ಹೆಚ್ಚು ಅಂಕಗಳನ್ನು ಪಡೆದು ಕ್ರೀಡಾಕೂಟದ ಸಮಗ್ರ ಪ್ರಶಸ್ತಿ ಪಡೆದಿದೆ.
ಅಕ್ಟೋಬರ್ 29 ರಂದು ನಡೆದ ವಿಶ್ವ ಬಂಟರ ಸಾಂಸ್ಕೃತಿಕ ಉತ್ಸವದಲ್ಲಿ ಕ್ರೀಡಾಕೂಟದ ಬಹುಮಾನವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ.ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯಧ್ಯಕ್ಷ ಮಹೇಶ್ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯ ಅಧ್ಯಕ್ಷ ಕಿಶೋರ್ ಶೆಟ್ಟಿ ಕುತ್ಯಾರ್, ಕ್ರೀಡಾ ವಿಭಾಗದ ಉಪಕಾರ್ಯಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್ ಇವರ ಉಪಸ್ಥಿತಿಯಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಉದಯ್ ಶೆಟ್ಟಿ ಪೆಲತ್ತೂರು, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ, ರಮೇಶ್ ಶೆಟ್ಟಿ ಸಿದ್ದಕಟ್ಟೆ, ಮಹಿಳಾ ವಿಭಾಗದ ಪದಾಧಿಕಾರಿಗಳು, ಮತ್ತಿತರ ಸದಸ್ಯರ ಉಪಸ್ಥಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ, ಪ್ರವೀಣ್ ಭೋಜ ಶೆಟ್ಟಿ, ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಒಕ್ಕೂಟದ ಮಹಾನಿರ್ದೇಶಕ ಅರವಿಂದ್ ಶೆಟ್ಟಿ ಮೀರಾ ರೋಡ್, ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ ಹಾಸ್ಪಿಟಾಲಿಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್, ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಬಂಟರವಾಣಿಯ ಕಾರ್ಯಧ್ಯಕ್ಷ ರವೀಂದ್ರನಾಥ್ ಭಂಡಾರಿ, ಮುಂಬಯಿ ಬಂಟರ ಸಂಘದ ವಸಾಯಿ- ಡಹಾಣು ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಹರೀಶ್ ಪಾಂಡು ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.