ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ 19ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಶಾಲೆಯ ಸುಸಜ್ಜಿತ ಕ್ರೀಡಾಂಗಣ ಜಿ ಎಮ್ ಅರೆನಾದಲ್ಲಿ ನವೆಂಬರ್ 4ರಂದು ನಡೆಯಿತು. ಕ್ರೀಡಾಕೂಟದ ಮುಖ್ಯ ಅತಿಥಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜೀವನ್ ಕುಮಾರ್ ಶೆಟ್ಟಿ ಕ್ರೀಡಾಜ್ಯೋತಿಯನ್ನು ಬೆಳಗಿ, ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಜಿ ಎಮ್ ಸಂಸ್ಥೆಯ ಹೊರಾಂಗಣ ವ್ಯವಸ್ಥೆಯನ್ನು ನೋಡುವಾಗ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟದ ಅನುಭವವಾಗುತ್ತಿದೆ. ಕ್ರೀಡೆ ಎಂದರೆ ಒಂದು ವಿಜ್ಞಾನ. ಕ್ರೀಡಾಪಟುಗಳು ಸೈನಿಕರಿದ್ದಂತೆ ಎಂದು ಹೇಳಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿ ಶಂಕರನಾರಾಯಣ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟರ್ ಸುದೀಪ್ ಶೆಟ್ಟಿ, ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ ಜಿ ಎಮ್ ಕರಾವಳಿಯ ಬಹುದೊಡ್ಡ ವಿದ್ಯಾಸಂಸ್ಥೆ, ಇದು ಶಿಕ್ಷಣ ಕ್ರಾಂತಿಯ ಜೊತೆಗೆ ಕ್ರೀಡೆಗೆ ಒತ್ತು ನೀಡುತ್ತಿದೆ, ಕ್ರೀಡೆಯಿಂದ ಬದುಕನ್ನು ಕಟ್ಟಿಕೊಳ್ಳಬಹುದು ಜೊತೆಗೆ ಆಸ್ಪತ್ರೆಯನ್ನು ನಮ್ಮಿಂದ ದೂರ ಇಡಬಹುದು ಎಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಕ್ರೀಡೆಗಳಿಂದ ಕೌಶಲ್ಯಗಳ ಅಭಿವೃದ್ಧಿ, ಸೋಲು ಗೆಲುವನ್ನು ಸಮಾನವಾಗಿ ಎದುರಿಸುವ ಮನೋಸ್ಥೈರ್ಯ ಬೆಳೆಯುತ್ತದೆ. ಜೊತೆಗೆ ಉತ್ತಮ ಕಲಿಕೆಗೆ ನೆರವಾಗುತ್ತದೆ ಎಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಕ್ರೀಡಾಪಟುಗಳಿಗೆ ಶುಭಹಾರೈಸಿ, ಮಕ್ಕಳೆಲ್ಲರೂ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧನೆಯನ್ನು ಮಾಡಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕೆಂದರು. ಕ್ರೀಡಾಕೂಟದಲ್ಲಿ ಜಿ ಎಮ್ ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾಗರಾಜ ಸೋಮಯಾಜಿ, ಉಪಾಧ್ಯಕ್ಷೆ ಶ್ರೀಮತಿ ಪ್ರೀತಿ,ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಶಾಲೆಯ ಮೇಧಾ ತಂಡ ಚಾಂಪಿಯನ್ಶಿಪ್ ಪಡೆದುಕೊಂಡಿತು.
Previous Articleಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕ ಉದ್ಘಾಟನೆ
Next Article ಇಂದಿನ ವಿದ್ಯಾರ್ಥಿ