ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ ಮಾಧ್ಯಮ ಕ್ಷೇತ್ರದ ಸಂಸ್ಥೆ ಸ್ಪೇಸ್ ಮೀಡಿಯಾ ಬೆಂಗಳೂರಿನ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿ ಅಂತಾರಾಷ್ಟ್ರೀಯ ಪ್ರಶಸ್ತಿ -2023 ಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನಿಸಿದರು.
ಸ್ಪೀಕರ್ ಯು.ಟಿ. ಖಾದರ್, ಎಸ್ ಡಿ ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಡಾ. ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಈ ಹಿಂದೆ ಕಿಶೋರ್ ಆಳ್ವ ಅವರು ಪ್ರತಿಷ್ಠಿತ ಬೆಂಗಳೂರು ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ನ( ಬಿಸಿಐಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾಭಿವೃದ್ಧಿಗೆ ಶ್ರಮಿಸಿದ್ದರು. ಪ್ರತಿಷ್ಟಿತ ಕೊಜೆಂಟ್ರಿಕ್ಸ್ ಚೈನಾ ಲೈಟ್ ಆಂಡ್ ಪವರ್, ಯುನೋಕಾಲ್ ಎಂಬ ಪ್ರತಿಷ್ಠಿತ ಸಂಸ್ಥೆಗಳಿಗೆ ಹಿರಿಯ ಸಲಹೆಗಾರರಾಗಿ ಕೈಗಾರಿಕಾಭಿವೃದ್ಧಿಗೆ ಕಿಶೋರ್ ಆಳ್ವ ಅವರು ಕೈಜೋಡಿಸಿದ್ದಾರೆ. ತಮ್ಮ ವಿದ್ಯಾರ್ಥಿ ದೆಸೆಯಲ್ಲೂ ಸಹ ಕಿಶೋರ್ ಆಳ್ವ ಅವರು ಸರ್ವ ಕಾಲೇಜು ವಿದ್ಯಾರ್ಥಿ ಸಮೂಹದ ಅಧ್ಯಕ್ಷರಾಗಿ ಕರಾವಳಿಯಲ್ಲಿ ಕೈಗಾರಿಕಾ ಅಭಿವೃದ್ಧಿಯಾಗಿ ಜಿಲ್ಲೆಗಳ ಅಭಿವೃದ್ಧಿಯಾಗಬೇಕು ಎಂದು ಧ್ಯೇಯ ಇಟ್ಟುಕೊಂಡಿದ್ದರು.