ಮಕ್ಕಳಿಗೆ ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯೂ ಅಗತ್ಯ. ಸಮಾಜದ ಅನೇಕ ಮಂದಿ ಜಗತ್ತಿನಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಸ್ತ್ರೀ – ಪುರುಷರೆಂಬ ಬೇಧವಿಲ್ಲದೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸಾಧನೆ ಇತರರಿಗೆ ಮಾದರಿಯಾಗಬೇಕು ಎಂದು ಉದ್ಯಮಿ, ಮೂಡಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಹೇಳಿದರು.
ಅವರು ಬಂಟರ ಸಂಘ ವಾಮದಪದವು ವಲಯ ವತಿಯಿಂದ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ ನೇತೃತ್ವದಲ್ಲಿ ಆಲದಪದವು ನಿವೇಶನದಲ್ಲಿ ಆಯೋಜಿಸಿದ್ದ ಪುರುಷರ ಮತ್ತು ಮಹಿಳೆಯರ ತಾಲೂಕು ಮಟ್ಟದ ಹಗ್ಗಜಗ್ಗಾಟ ಮತ್ತು ವಲಯ ಮಟ್ಟದ ಆಟೋಟ ಸ್ವರ್ಧೆ ಬಂಟ ಕ್ರೀಡೋತ್ಸವವನ್ನು ಉದ್ಘಾಟಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಾಮದಪದವು ವಲಯ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಅಮ್ಮು ರೈ ಹರ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ನಗರಸಭೆ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಇರಾ ವಲಯ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ರೈ ಬಾಲಾಜಿಬೈಲು ಶುಭ ಹಾರೈಸಿದರು.
ಮಂಗಳೂರು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷಿಕ ಮಹಾಬಲ ಶೆಟ್ಟಿ ಪಂಜೊಟ್ಟು, ಉದ್ಯಮಿಗಳಾದ ಜಯಶೀಲ ಅಡ್ಯಂತಾಯ, ಸಂಪತ್ ಶೆಟ್ಟಿ ಪಣಕಜೆ, ಬಂಟವಾಳ ಬಂಟರ ಸಂಘದ ಜತೆ ಕಾರ್ಯದರ್ಶಿ ರಂಜನ್ ಕುಮಾರ್ ಶೆಟ್ಟಿ ಅರಳ, ಬೆಳ್ಳೂರು ವಲಯ ಬಂಟರ ಸಂಘದ ಅಧ್ಯಕ್ಷ ಜನಾರ್ಧನ್ ಶೆಟ್ಟಿ, ಇರಾ ವಲಯ ಬಂಟರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ ಇರಾಗುತ್ತು, ಅರಳ ವಲಯ ಬಂಟರ ಸಂಘದ ಅಧ್ಯಕ್ಷ ಸುಕುಮಾರ್ ಶೆಟ್ಟಿ, ಫರಂಗಿಪೇಟೆ ವಲಯ ಬಂಟರ ಸಂಘದ ಅಧ್ಯಕ್ಷ ದೇವದಾಸ್ ಶೆಟ್ಟಿ ಕೊಡ್ಮಾಣ್, ನ್ಯಾಯವಾದಿ ಸುರೇಶ್ ಶೆಟ್ಟಿ, ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಮಹಿಳಾ ವಿಭಾಗ ಅಧ್ಯಕ್ಷೆ ಚೇತನಾ ರಾಮಚಂದ್ರ ಶೆಟ್ಟಿ ದಂಡೆ, ಯುವ ವಿಭಾಗ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ ಗಂಟರ ಬೆಟ್ಟು ಗುತ್ತು ಉಪಸ್ಥಿತರಿದ್ದರು.
ವಾಮದಪದವು ವಲಯ ಬಂಟರ ಸಂಘದ ಉಪಾಧ್ಯಕ್ಷ ರಮೇಶ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗಂಗಾಧರ್ ಶೆಟ್ಟಿ ಕೋಡ್ಯೇಲು ವಂದಿಸಿದರು. ಕಿಶೋರ್ ಕುಮಾರ್ ಭಂಡಾರಿ ನಿರೂಪಿಸಿದರು.