ಯುವ ಜನರಿಗೆ ಇಂದು ಬದುಕು ಕಟ್ಟಿಕೊಳ್ಳಲು ಹಿಂದಿನವರಂತೆ ಉದ್ಯೋಗವನ್ನು ಅರಸಿ ವಲಸೆ ಹೋಗಲೇಬೇಕೆಂಬ ಸ್ಥಿತಿ ಇಲ್ಲ. ಸಮರ್ಥರಿಗೆ ಈಗ ವಿಪುಲ ಉದ್ಯೋಗ ಅವಕಾಶಗಳಿವೆ. ಮನೆ ಬಾಗಿಲಿಗೆ ಉದ್ಯೋಗವಕಾಶವನ್ನು ಒದಗಿಸುವ ಕೆಲಸ ಮಾಡುತ್ತಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಪ್ರಯತ್ನ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ಕುಂತಳ ನಗರ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಬೆಂಗಳೂರು ಎಂಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಡವನಾಗಿ ಹುಟ್ಟುವುದು ತಪ್ಪಲ್ಲ. ಆ ಆಯ್ಕೆ ನಮ್ಮ ಕೈಯಲ್ಲಿ ಇಲ್ಲ. ಆದರೆ ಬಡವನಾಗಿ ಸಾಯಬಾರದು. ಎಲ್ಲರಿಗೂ ಅವಕಾಶ ಇರುತ್ತದೆ. ಅದನ್ನು ಬಳಸಿಕೊಂಡು ಬದುಕಿನಲ್ಲಿ ಮೇಲೆ ಬರಬೇಕು ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ತಿಂಗಳೆ ಪ್ರತಿಷ್ಠಾನದ ಪ್ರವರ್ತಕ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ, ಪ್ರಮುಖರಾದ ನವೀನ್ ಚಂದ್ರ ಜೆ. ಶೆಟ್ಟಿ, ಯೋಗೀಶ್ ವಿ. ಶೆಟ್ಟಿ, ಶ್ರೀ ನಾಗೇಶ್ ಹೆಗ್ಡೆ, ಸುಪ್ರಸಾದ್ ಶೆಟ್ಟಿ ಬೈಕಾಡಿ, ಸುರೇಶ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಮನೋಹರ್ ಶೆಟ್ಟಿ ತೋನ್ಸೆ, ಶಿವಪ್ರಸಾದ್ ಹೆಗ್ಡೆ, ಡಾ. ಎಚ್. ಬಿ. ಶೆಟ್ಟಿ, ಮಹಮ್ಮದ್ ಅಜೀಝ್ ಪಡುಬಿದ್ರಿ, ಸಂತೋಷ್ ಕುಮಾರ್ ಶೆಟ್ಟಿ, ಪ್ರದೀಪ್ ಶೆಟ್ಟಿ, ರಂಜಿನಿ ಹೆಗ್ಡೆ, ಪದ್ಮನಾಭ ಹೆಗ್ಡೆ, ರಮೇಶ್ ಶೆಟ್ಟಿ ನಿಂಜೂರು ಉಪಸ್ಥಿತರಿದ್ದರು.
ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉದ್ಯೋಗ ಮೇಳದ ಛೇರ್ಮನ್ ಗುರು ಪ್ರಶಾಂತ್ ಭಟ್ ವರದಿ ನೀಡಿದರು. ಟ್ರಸ್ಟ್ ನ ಕೋಶಾಧಿಕಾರಿ ವಿಜಿತ್ ಶೆಟ್ಟಿ ವಂದಿಸಿದರು. ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನ ಪ್ರೋಗ್ರಾಮ್ ಕೋ ಅರ್ಡಿನೇಟರ್ ದಿವ್ಯಾರಾಣಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.