ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಅವರಿಗೆ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ “ಸಹಕಾರ ರತ್ನ” ಪ್ರಶಸ್ತಿಯನ್ನು ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ಮಂಗಳೂರು ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರೂ ಆಗಿರುವ ಮೋನಪ್ಪ ಶೆಟ್ಟಿ ಅವರ 4 ದಶಕಗಳಿಗೂ ಹೆಚ್ಚು ಅವಧಿಯ ಸಹಕಾರ ಕ್ಷೇತ್ರದಲ್ಲಿನ ಸೇವೆ ಹಾಗೂ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಸಮಗ್ರ ಪ್ರಗತಿಯನ್ನು ಪರಿಗಣಿಸಿ ರಾಜ್ಯ ಸರಕಾರ “ಸಹಕಾರ ರತ್ನ” ಪ್ರಶಸ್ತಿ ನೀಡಿದೆ.
ಸಹಕಾರ ಸಚಿವ ಎನ್. ರಾಜಣ್ಣ, ಜವುಳಿ, ಕಬ್ಬು, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಿರಿಯ ಸಹಕಾರಿ ಮುಖಂಡ ಶಿವಾನಂದ ಎಸ್, ಅಬಕಾರಿ ಸಚಿವ ತಿಮ್ಮಾಪುರ್, ರಾಜ್ಯ ಸಹಕಾರಿ ಫೆಡರೇಶನ್ ಅಧ್ಯಕ್ಷ ಮಾಜಿ ಸಚಿವ ಜಿ.ಟಿ. ದೇವೇಗೌಡ, ಸಂಸದ ರಮೇಶ್ ಜಿಗಜಿಣಗಿ, ಸಂಸದ ಪಿ.ಸಿ. ಗದ್ದಿಗೌಡರ ಉಪಸ್ಥಿತರಿದ್ದರು