ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ. ಜಗನ್ನಾಥ ರೈಯವರು ಬಜನಿಗುತ್ತು ರಾಮಯ್ಯ ರೈ ಹಾಗೂ ಕುಸುಮಾವತಿ ದಂಪತಿಯ ಪುತ್ರ. ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು.
1996 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇರ್ಪಡೆಗೊಂಡ ಜಗನ್ನಾಥ್ ರೈಯವರು, ನಂತರ ಇನ್ಸ್ ಪೆಕ್ಟರ್, ಸರ್ಕಲ್ ಇನ್ಸ್ ಪೆಕ್ಟರ್ ಆಗಿ ತದನಂತ ಡಿವೈಎಸ್ಪಿ ಯಾಗಿ ಸಿಸಿಬಿ ಎಸಿಪಿಯಾಗಿ, ಇದೀಗ ಬೆಂಗಳೂರಿನ ಗುಪ್ತಚಾರ ವಿಭಾಗದ ಎಸ್ಪಿಯಾಗಿ ಪದೋನ್ನತಿ ಹೊಂದಿದ್ದಾರೆ.