ಬಂಟರ ಸಂಘ ಮುಂಬಯಿ ಇದರ 2023-26 ರ ಮೂರು ವರ್ಷಗಳ ಅವಧಿಗೆ ನವೆಂಬರ್ 30 ರಂದು ಸಂಜೆ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು.
ಬಂಟರ ಸಂಘ ಮುಂಬಯಿಯ 31ನೇ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಈಗಾಗಲೇ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಬಾಬಾ ಗ್ರೂಪ್ ಆಫ್ ಕಂಪನಿಯ ಆಡಳಿತ ನಿರ್ದೇಶಕ ಮಹೇಶ್ ಎಸ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ. ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿಯಾಗಿ ಸಿಎ ರಮೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಉದ್ಯಮಿ ಗಿರೀಶ್ ಶೆಟ್ಟಿ, ತೆಳ್ಳಾರ್, ಜೊತೆ ಕೋಶಾಧಿಕಾರಿಯಾಗಿ ಉದ್ಯಮಿ ಶಶಿಧರ್ ಕೆ ಶೆಟ್ಟಿ ಇನ್ನಂಜೆ ಮತ್ತು ಯುವ ವಿಭಾಗದ ಕಾರ್ಯಧ್ಯಕ್ಷರಾಗಿ ಸವಿನ್ ಜೆ. ಶೆಟ್ಟಿಯವರು ಮುಂದಿನ 3 ವರ್ಷಗಳ ಅವಧಿಗೆ ಆಯ್ಕೆಯಾದರು.
ವೇದಿಕೆಯಲ್ಲಿ ನಿರ್ಗಮನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಉಪಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್ ಕೆ ಶೆಟ್ಟಿ, ಜೊತೆ ಕಾರ್ಯದರ್ಶಿ ದಿವಾಕರ ಶೆಟ್ಟಿ ಇಂದ್ರಾಳಿ, ಜೊತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ ಉಪಸ್ಥಿತರಿದ್ದು, ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಬಿ.ಶೆಟ್ಟಿ ನೂತನ ಪದಾಧಿಕಾರಿಗಳ ಘೋಷಣೆ ಮಾಡಿದರು.