ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮಾಜಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ 2023 – 26 ರ ಮೂರು ವರ್ಷಗಳ ಅವಧಿಗೆ ಬಂಟರ ಸಂಘದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ನಿರ್ಗಮನ ಮತ್ತು ನೂತನ ಆಗಮನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಚಿತ್ರಾ ಆರ್ ಶೆಟ್ಟಿಯವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿದರು.
ಡಿಸೆಂಬರ್ 2 ರಂದು ಸಂಜೆ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಎಲ್ಲಾ ವಿಶ್ವಸ್ಥರು, ಮಾಜಿ ಅಧ್ಯಕ್ಷರು, ನಿರ್ಗಮನ ಮತ್ತು ನೂತನ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದ ಚಿತ್ರಾ ಆರ್ ಶೆಟ್ಟಿಯವರನ್ನು ಸಂಘದ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದನ್ನು ಅನುಮೋದಿಸಿ ಪುಷ್ಪ ಗೌರವ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಕೆ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಬಿ ವಿವೇಕ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಸಿಎ ಶಂಕರ್ ಬಿ ಶೆಟ್ಟಿ, ಪದ್ಮನಾಭ ಎಸ್ ಪಯ್ಯಡೆ, ಬಂಟರ ಸಂಘದ ನೂತನ ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ ಆರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ರಮೇಶ್ ಬಿ ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಜೊತೆ ಕೋಶಾಧಿಕಾರಿ ಶಶಿಧರ್ ಕೆ ಶೆಟ್ಟಿ ಇನ್ನಂಜೆ, ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ್ ಶೆಟ್ಟಿ, ಪೊವಾಯಿ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಆದರ್ಶ್ ಶೆಟ್ಟಿ ಉಪಸ್ಥಿತರಿದ್ದರು.