ಆಕರ್ಷಕ ಪಥಸಂಚಲನ, ಕ್ರೀಡಾ ಜ್ಯೋತಿ ಆಗಮನ, ಧ್ವಜಾರೋಹಣ, ಕ್ರೀಡಾ ಪ್ರತಿಜ್ಞೆ ಸ್ವೀಕಾರ – ಇತ್ಯಾದಿಗಳೊಂದಿಗೆ 2023 – 24 ನೇ ಸಾಲಿನ ಕರ್ನಾಟಕ ವಿದ್ಯಾಸಂಸ್ಥೆಗಳು ಮಾಣಿ ಇದರ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಕೆ. ಭಂಡಾರಿ ಮುಖ್ಯ ಅತಿಥಿಯಾಗಿ ಆಗಮಿಸಿ “ಪಾಠ ಮತ್ತು ಆಟ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಆಟಗಳಿಂದ ಆತ್ಮಸ್ಥೈರ್ಯ ಮತ್ತು ಮಾನಸಿಕ ಕ್ಷಮತೆ ಹೆಚ್ಚಾಗುತ್ತದೆ” ಎಂದರು. ಇನ್ನೋರ್ವ ಮುಖ್ಯ ಅತಿಥಿಯಾದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಲಯನ್ಸ್ ಕ್ಲಬ್ ಮಾಣಿ ಇದರ ಸ್ಥಾಪಕಾಧ್ಯಕ್ಷರಾದ ಲಯನ್ ಗಂಗಾಧರ್ ರೈ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಮಾಡಿದರು.
ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ರೊ. ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಜಿ. ಇಬ್ರಾಹಿಂ, ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಹರೀಶ್ ಮಾಣಿ ಹಾಗೂ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಎಸ್. ಚೆನ್ನಪ್ಪ ಗೌಡ ಸ್ವಾಗತಿಸಿ, ಆಂ. ಮಾ. ಶಾ. ಮುಖ್ಯ ಶಿಕ್ಷಕಿ ಸಾರಿಕಾ ವಂದಿಸಿ ಹಿಂದಿ ಶಿಕ್ಷಕರಾದ ಜಯರಾಮ ಕಾಂಚನ ಕಾರ್ಯಕ್ರಮ ನಿರೂಪಿಸಿದರು.