ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ಕಾರ್ಯಾಧ್ಯಕ್ಷರಾಗಿ ಮುಂಬಯಿಯ ಸಮಾಜ ಸೇವಕ, ಕಾಂಗ್ರೆಸ್ ಪಕ್ಷದ ನಾಯಕ ಸುರೇಶ್ ಶೆಟ್ಟಿ ಯೆಯ್ಯಾಡಿಯವರನ್ನು ಅಖಿಲ ಭಾರತ ಕಾಂಗ್ರೆಸ್ಸಿನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆದೇಶ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಹಾರಾಷ್ಟ್ರ ಪ್ರಭಾರಿ ಪ್ರಕಾಶ್ ಗಾಳೆ ಅವರ ಶಿಫಾರಸ್ಸಿನ ಮೇರೆಗೆ ಮಹಾರಾಷ್ಟ್ರ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಾಟೋಲೆ ನಿಯಕ್ತಿಗೊಳಿಸಿದ್ದಾರೆ.
ಸುರೇಶ್ ಶೆಟ್ಟಿ ಯೆಯ್ಯಾಡಿ ಈ ಮೊದಲು ಮುಂಬಯಿಯ ವಿಭಾಗೀಯ ಕಾಂಗ್ರೆಸ್ ಸಮಿತಿಯಲ್ಲಿ ಬ್ಲಾಕ್ ಕಾರ್ಯದರ್ಶಿಯಾಗಿ, ಬ್ಲಾಕ್ ಉಪಾಧ್ಯಕ್ಷರಾಗಿ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪರ್ಯಾವರಣ ವಿಭಾಗದಲ್ಲಿ ಉಪಾಧ್ಯಕ್ಷರಾಗಿ ಹಾಗೂ ಇಂಟಕ್ ನ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷದಲ್ಲಿ ಕೆಲಸವನ್ನು ಮಾಡಿರುತ್ತಾರೆ.
ಕರ್ನಾಟಕದಲ್ಲಿ ನಡೆದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಕ್ರಿಯವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದವರಾಗಿದ್ದಾರೆ. ಮುಂಬಯಿಯಲ್ಲೂ ಜಾತಿ ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ಫು, ಕನ್ನಡ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿ ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಾರ್ಯಪ್ರವೃತರಾಗಿದ್ದಾರೆ. ಕ್ರೀಡೆ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.