ಬಂಟರ ಸಂಘ ಮುಂಬಯಿ ಇದರ ನೂತನ ಟ್ರಸ್ಟಿಯಾಗಿ ಸರ್ವಾನುಮತದಿಂದ ನೇಮಕಗೊಂಡಿರುವ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ದಾಸ್ ಶೆಟ್ಟಿಯವರನ್ನು ಸೊಸೈಟಿಯ ಮಾಸಿಕ ಸಭೆಯಲ್ಲಿ ಮಾತೃಭೂಮಿ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಯ ಉಪ ಕಾರ್ಯಾಧ್ಯಕ್ಷ ಡಾ ಆರ್ ಕೆ ಶೆಟ್ಟಿ, ಗೌರವ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಗೌರವ ಕೋಶಾಧಿಕಾರಿ ಸಿಎ ಹರೀಶ್ ಶೆಟ್ಟಿಯವರು ಗೌರವಿಸಿದರು.
ಈ ಸಂದರ್ಭದಲ್ಲಿ ಮಾತೃಭೂಮಿ ಸೊಸೈಟಿಯ ನಿರ್ದೇಶಕರಾದ ಮಹೇಶ್ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.