ನಮ್ಮ ಸಂಸ್ಕೃತಿ ಪರಂಪರೆಯನ್ನು ಮಕ್ಕಳಿಗೆ ಕಲಿಸುವ ಕೆಲಸ ನಮ್ಮ ತಾಯಿಂದಿರು ಮಾಡಬೇಕು. ಸಾಮಾಜಿಕ ಬದುಕಿನಲ್ಲಿ ಬಂಟರ ಪಾತ್ರ ಕುರಿತು ಎಲ್ಲರೂ ಅರಿಯಬೇಕು ಎಂದು ಲೇಖಕ ಶ್ರೀಕಾಂತ್ ಶೆಟ್ಟಿ ಹೇಳಿದರು. ಅವರು ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯ ಇದರ ಆಶ್ರಯದಲ್ಲಿ ನಡೆದ ಬಂಟರ ವಾರ್ಷಿಕ ಸಮಾವೇಶದಲ್ಲಿ ಸಾಮಾಜಿಕ ಬದುಕಿನಲ್ಲಿ ಬಂಟರ ಪಾತ್ರ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಮಲ್ಲಿಕಾ ಸುಮಂತ್ ಶೆಟ್ಟಿ ಉದ್ಘಾಟಿಸಿದರು.
ಬಂಟರ ಸಂಘದ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ನ ಸಮಾಜ ಭಾಂದವರು ಸಕ್ರೀಯವಾಗಿ ಭಾಗವಹಿಸಿರುವ ಪರಿಣಾಮ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು. ಸಮಾರಂಭದಲ್ಲಿ ಉದ್ಯಮಿ ಹರೀಶ್ ಶೆಟ್ಟಿ, ಸಮಾವೇಶ ಸಮಿತಿಯ ಸಂಚಾಲಕರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಆಶಾಲತಾ ಬಿ.ಶೆಟ್ಟಿ, ಉಪಾಧ್ಯಕ್ಷರಾದ ವಾದಿರಾಜ್ ಶೆಟ್ಟಿ, ಹರ್ಷ ಶೆಟ್ಟಿ, ಕುಂಟಿನಿ ಭಾಸ್ಕರ್ ಶೆಟ್ಟಿ, ದಯಾನಂದ ಶೆಟ್ಟಿ, ಸುರೇಶ್ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಬಾನು ಪಿ.ಬಲ್ಲಾಳ್, ಮಾತೃ ಸಂಘದ ನಿರ್ದೇಶಕರಾದ ಭೂತುಗುಂಡಿ ಕರುಣಾಕರ ಶೆಟ್ಟಿ, ಪ್ರಮೋದ್ ಆರ್ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಅಡ್ಯಂತಾಯ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಉದಯಕುಮಾರ್ ಶೆಟ್ಟಿ, ಶಕುಂತಲಾ ಬಲ್ಲಾಳ್, ಯಶೋಧ ಶೆಟ್ಟಿ, ಯುವ ಅಧ್ಯಕ್ಷ ದಿನೇಶ್ ಶೆಟ್ಟಿ, ಜ್ಯೋತಿ ಕೆ.ಶೆಟ್ಟಿ, ಪ್ರಕಾಶ್ ಶೆಟ್ಟಿ, ರಾಜೇಶ್ವರಿ ಪಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಮಿತಿಯ ಪ್ರವೀಣ್ ಶೆಟ್ಟಿ ಸ್ವಾಗತಿಸಿ, ಸಂಘದ ಸಹಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಹಾಗೂ ಸಾಂಸ್ಕೃತಿಕ ಸಮಿತಿಯ ದೀಪಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸೋನಿ ಪಿ.ಶೆಟ್ಟಿ ವಂದಿಸಿದರು.