ನಿರಂತರ ಅಭ್ಯಾಸ, ಪ್ರಾಮಾಣಿಕತೆ, ಆತ್ಮವಿಶ್ವಾಸದ ಜತೆಗೆ ಕೌಶಲಾಭಿವೃದ್ಧಿಯಿಂದ ಸುಭದ್ರ ಬದುಕು ಕಟ್ಟಿಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಕೌಶಲಾಭಿವೃದ್ಧಿ, ಉದ್ಯೋಗಾವಕಾಶ, ಉಚಿತ ಕಂಪ್ಯೂಟರ್ ತರಬೇತಿಯ ಸದಾವಕಾಶ ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಿರಿ ಎಂದು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಕರೆ ನೀಡಿದರು. ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ ನ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಪ್ರಾಯೋಜಕತ್ವದಲ್ಲಿ ನಡೆದ 14ನೇ ಬ್ಯಾಚ್ ನ ಉಚಿತ ಕಂಪ್ಯೂಟರ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಪಡುಬಿದ್ರಿ ಬಂಟರ ಸಂಘ ಮತ್ತು ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಆತ್ಮಸ್ಥೈರ್ಯದೊಂದಿಗೆ ನಿಖರ ಗುರಿಯೊಂದಿಗೆ ಭವಿಷ್ಯವನ್ನು ಸುಭದ್ರಗೊಳಿಸಿರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ 13 ನೇ ಬ್ಯಾಚ್ ಮೂಲಕ 260 ಮಂದಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡಲಾಗಿದ್ದು, ಟ್ರಸ್ಟ್ ವತಿಯಿಂದ ಕೌಶಲಾಭಿವೃದ್ಧಿ ತರಬೇತಿಯೊಂದಿಗೆ ಜಾಬ್ ಮೇಳವನ್ನು ಆಯೋಜಿಸಿ ಗ್ರಾಮೀಣ ಭಾಗದ ಯುವ ಜನತೆಗೆ ಆಸರೆಯಾಗುತ್ತಿದೆ ಎಂದರು.
ವೇದಿಕೆಯಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ನ ಸಿಎಸ್ ಆರ್ ಎಕ್ಸಿಕ್ಯೂಟಿವ್ ಸವಿಸ್ತಾರ್ ಆಳ್ವ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ, ಟ್ರಸ್ಟಿಗಳಾದ ದಯಾನಂದ ಶೆಟ್ಟಿ ಕಲ್ಮಂಜೆ, ಸತೀಶ್ ಶೆಟ್ಟಿ, ರಮೇಶ್ ಶೆಟ್ಟಿ, ಮೈಸ್ ನ ಕಂಪ್ಯೂಟರ್ ತರಬೇತುದಾರ ವಿಷ್ಣುಮೂರ್ತಿ ಆಚಾರ್ಯ ಇದ್ದರು. ಟ್ರಸ್ಟ್ ನ ಕೋಶಾಧಿಕಾರಿ ವಿಜಿತ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಟ್ರಸ್ಟಿ ರಂಜನಿ ಹೆಗ್ಡೆ ವಂದಿಸಿದರು.